ರಾಹುಲ್ ಗಾಂಧಿ ಕರೆದಿಲ್ಲ ಆರ್‌ಎಸ್‌ಎಸ್! ವೇಟ್ ಆ್ಯಂಡ್ ಸೀ ಎಂದ ಕಾಂಗ್ರೆಸ್! ನವದೆಹಲಿಯಲ್ಲಿ ಸಂಘದ ವಿಚಾರ ಸಂಕೀರಣ! ರಾಹುಲ್ ಗಾಂಧಿಗೆ ಆಹ್ವಾನ ನೀಡಿದೆಯಾ ಆರ್‌ಎಸ್‌ಎಸ್! ಅಧಿಕೃತ ಆಹ್ವಾನ ಬಂದಾಗ ಯೋಚಿಸುವುದಾಗಿ ಕಾಂಗ್ರೆಸ್ ಪ್ರತಿಕ್ರಿಯೆ
ನವದೆಹಲಿ(ಆ.28): ರಾಷ್ಟ್ರೀಯ ಸ್ವಯಂ ಸೇವಕ ಸಂಘ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಅಹ್ವಾನ ನೀಡಲಾಗಿದೆ ಎಂಬ ಸುದ್ದಿ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ.
ಮುಂದಿನ ತಿಂಗಳು ನವದೆಹಲಿಯಲ್ಲಿ ಆರ್‌ಎಸ್‌ಎಸ್ ವಿಚಾರ ಸಂಕೀರಣ ನಡೆಯಲಿದ್ದು, ಈ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಆಹ್ವಾನಿಸಲಾಗಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.
ಆದರೆ ಆರ್‌ಎಸ್‌ಎಸ್‌ನಿಂದ ಇಂತಹ ಯಾವುದೇ ಆಹ್ವಾನ ಬಂದಿಲ್ಲ ಎಂದು ಕಾಂಗ್ರೆಸ್ ಸ್ಪಷ್ಟಪಡಿಸಿದ್ದು, ಒಂದು ವೇಳೆ ಆರ್‌ಎಸ್‌ಎಸ್ ರಾಹುಲ್ ಗಾಂಧಿ ಅವರಿಗೆ ಆಹ್ವಾನ ನೀಡಿದರೆ ಈ ಕುರಿತು ನಿಧರ್ಧರಿಸಲಾಗುವುದು ಎಂದು ತಿಳಿಸಿದೆ.
ಈ ಕುರಿತು ಮಾತನಾಡಿರುವ ಕಾಂಗ್ರೆಸ್ ವಕ್ತಾರ ಅಭಿಷೇಕ್ ಸಿಂಘ್ವಿ, ಕೇವಲ ಊಹಾಪೋಹಗಳ ಮೇಲೆ ಪ್ರತಿಕ್ರಿಯೆ ನೀಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಒಂದು ವೇಳೆ ಆರ್‌ಎಸ್‌ಎಸ್‌ನಿಂದ ಅಧಿಕೃತ ಆಹ್ವಾನ ಬಂದರೆ ಈ ಕುರಿತು ಚರ್ಚೆ ಮಾಡಬಹುದು ಎಂದು ಅವರು ಸ್ಪಷ್ಟಪಡಿಸಿದರು.
ಈ ವಿಚಾರ ಸಂಕೀರಣದಲ್ಲಿ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಪಾಲ್ಗೊಳ್ಳಲಿದ್ದು, ಇದಕ್ಕೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಸಿಪಿಎಂ ಮುಖ್ಯಸ್ಥ ಸೀತಾರಾಂ ಯೆಚೂರಿ ಅವರಿಗೆ ಆಹ್ವಾನ ನೀಡಲಾಗಿದೆ ಎನ್ನಲಾಗುತ್ತಿದೆ.
