ಯುವತಿಯರು ಪ್ರವೇಶಿಸಿ ಪೂಜೆ ಸಲ್ಲಿಸಿದ ಫೋಟೋಗಳು ಭಾರೀ ವಿವಾದಕ್ಕೆ ಕಾರಣವಾಗಿತ್ತು

ತಿರುವನಂತಪುರಂ(ಏ.27): ಇತ್ತೀಚೆಗೆ ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯಕ್ಕೆ ಯುವತಿಯರು ಪ್ರವೇಶಿಸಿ ಪೂಜೆ ಸಲ್ಲಿಸಿದ ಫೋಟೋಗಳು ಭಾರೀ ವಿವಾದಕ್ಕೆ ಕಾರಣವಾಗಿತ್ತು. ಆದರೆ ಈ ಕುರಿತು ತನಿಖೆ ನಡೆಸಲು ರಚಿಸಲಾಗಿದ್ದ ಸಮಿತಿಯು,ದೇವಾಲಯದ ಒಳಗಕ್ಕೆ 50 ವರ್ಷದ ಒಳಗಿನ ಮಹಿಳೆಯರು ಪ್ರವೇಶ ಮಾಡಿಲ್ಲ ಎಂದು ಸ್ಪಷ್ಟಪಡಿಸಿದೆ.ತನಿಖೆಯ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿದ್ದು, ಆರೋಪ ನಿರಾಧಾರ ಎಂದು ಹೇಳಿದೆ. ಭಾವಚಿತ್ರದಲ್ಲಿ ಇರುವ ಮಹಿಳೆಯರು 50 ವರ್ಷ ಮೇಲ್ಪಟ್ಟವರಾಗಿದ್ದಾರೆ. ಆರೋಪಕ್ಕೆ ಯಾವುದೇ ಸಾಕ್ಷ್ಯಾಧಾರಗಳಿಲ್ಲ. ಹೀಗಾಗಿ ದೇವಾಸ್ಥಾನ ಆಡಳಿತ ಮಂಡಳಿ ಕ್ರಮ ಕೈಗೊಳ್ಳಬೇಕಾದ ಅಗತ್ಯವಿಲ್ಲ ಎಂದು ವರದಿ ತಿಳಿಸಿದೆ.