ಕೋಲ್ಕತ್ತಾ[ಫೆ.05]: ಕೋಲ್ಕತ್ತಾ ಪೊಲೀಸ್ ಆಯುಕ್ತರ ವಿಚಾರಣೆಗೆ ಬಂದಿದ್ದ ಸಿಬಿಐ ತಂಡಕ್ಕೆ ಸೆಡ್ಡು ಹೊಡೆದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ನಡೆಸುತ್ತಿರುವ ಪ್ರತಿಭಟನೆ ಎರಡನೇ ದಿನಕ್ಕೆ ಕಾಲಿಟ್ಟಿದೆ. ಹೀಗಿರುವಾಗಲೇ ತನಿಖೆಗೆ ತಡೆಯೊಡ್ಡಿರುವ ವಿರುದ್ಧ ಸಿಬಿಐ ಸಲ್ಲಿಸಿರುವ ಅರ್ಜಿಯ ವಿಚಾರಣೆಯೂ ನಡೆದಿದ್ದು, ಸುಪ್ರೀಂಕೋರ್ಟ್ ನಲ್ಲಿ ದೀದಿಗೆ ತೀವ್ರ ಹಿನ್ನಡೆಯಾಗಿದೆ. 

"

ಶಾರದಾ ಚಿಟ್ ಫಂಡ್ ಹಗರಣದ ತನಿಖೆಗೆ ಸಿಬಿಐ ಮುಂದೆ ಪೂರ್ಣ ಸಹಕಾರ ನೀಡುವಂತೆ ಸುಪ್ರೀಂ ಕೋರ್ಟ್ ಪೊಲೀಸ್ ಹೈಕಮಿಷನರ್ ಗೆ ಆದೇಶ ನೀಡಿದೆ. ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಡಿಜಿಪಿ ಹಾಗೂ ಕಮಿಷನರ್ ಕುಮಾರ್ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂರತೆ ನೋಟಿಸ್ ಜಾರಿಗೊಳಿಸಿದ್ದು ಫೆ. 20ರೊಳಗೆ ಇದಕ್ಕೆ ಉತ್ತರಿಸುವಂತೆ ಸೂಚಿಸಿದೆ. ಸುಪ್ರೀಂ ಕೋರ್ಟ್ ನ ಈ ಅದೇಶದಿಂದ ಮಮತಾ ಬ್ಯಾನರ್ಜಿಗೆ ತೀವ್ರ ಹಿನ್ನಡೆಯಾಗಿದೆ.

"

ಇನ್ನು ಸುಪ್ರೀಂ ಆದೇಶದ ಕುರಿತಾಗಿ ಪ್ರತಿಕ್ರಿಯಿಸಿರುವ ಮಮತಾ 'ಇದು ನಮ್ಮ ಹೋರಾಟದ ಗೆಲುವು, ದೇಶದಲ್ಲಿ ಯಾರೂ ದೊಡ್ಡವರಲ್ಲ’ ಎನ್ನುವ ಮೂಲಕ ಪ್ರಧಾನಿ ಮೋದಿಗೆ ಟಾಂಗ್ ನೀಡಿದ್ದಾರೆ.

"