ಮಾನನಷ್ಟ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮುಖ್ಯಮಂತ್ರಿ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿಯಾಗಿದೆ. ಯಾವ ಪ್ರಕಣ? ಇಲ್ಲಿದೆ ಡಿಟೇಲ್ಸ್.

ಹೈದರಾಬಾದ್, [ಡಿ.21]: ಮಾನನಷ್ಟ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ, ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ದಿಗ್ವಿಜಯ್ ಸಿಂಗ್ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿ ಮಾಡಲಾಗಿದೆ.

ತೆಲಂಗಾಣದ ಎಐಎಂಐಎಂ ಮುಖಂಡ ಅಸಾದುದ್ದೀನ್ ಓವೈಸಿ ಅವರ ವಿರುದ್ಧ ಮಾನಹಾನಿಯುಂಟು ಮಾಡುವ ಹೇಳಿಕೆ ನೀಡಿದ್ದ ಆರೋಪ ಮೇಲೆ ದಿಗ್ವಿಜಯ್ ಸಿಂಗ್ ದೂರು ದಾಖಲಾಗಿತ್ತು.

ಅಸಾದುದ್ದೀನ್ ಓವೈಸಿ ಅವರು ಹಣಕ್ಕಾಗಿ ಬೇರೆ ಬೇರೆ ರಾಜ್ಯಗಳಲ್ಲಿ ಚುನಾವಣೆಗಳಲ್ಲಿ ಪಾಲ್ಗೊಳ್ಳುತ್ತಿದ್ದಾರೆ ಎಂದು ದಿಗ್ವಿಜಯ್ ಸಿಂಗ್ ಹೇಳಿಕೆ ನೀಡಿದ್ದರು.

ಅದರ ವಿರುದ್ಧ ಓವೈಸಿ ಕೋರ್ಟ್ ಮೆಟ್ಟಿಲೇರಿದ್ದರು. ಈ ವಿಚಾರಣೆ ನಡೆಸಿದ ಹೈದರಾಬಾದ್‌ನ ನಾಂಪಲ್ಲಿಯ 8ನೇ ಎಸಿಎಂಎಂ ನ್ಯಾಯಾಲಯ ದಿಗ್ವಿಜಯ್ ಸಿಂಗ್ ವಿರುದ್ಧ ಜಾಮೀನು ರಹಿತ ವಾರಂಟ್ ಹೊರಡಿಸಿದೆ. 

ತಮ್ಮ ವಿರುದ್ಧದ ಮಾನನಷ್ಟ ಪ್ರಕರಣದ ವಿಚಾರಣೆಗೆ ದಿಗ್ವಿಜಯ್ ಸಿಂಗ್ ನಿರಂತರವಾಗಿ ಗೈರು ಹಾಜರಾಗಿದ್ದರು. ಹೀಗಾಗಿ ಅವರ ವಿರುದ್ಧ ವಾರಂಟ್ ಜಾರಿ ಮಾಡಲಾಗಿದೆ.