ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್ ಈಶ್ವರಪ್ಪಗೆ ಸಂಕಷ್ಟ ಎದುರಾಗಿದೆ.ಅವರ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿಯಾಗಿದೆ.ಯಾವ ಪ್ರಕರಣಕ್ಕೆ? ಇಲ್ಲಿದೆ ವಿವರ
ಬೆಂಗಳೂರು, (ಅ.29): ಕರ್ನಾಟಕ ಬಂದ್‌ಗೆ ಕರೆ ನೀಡಿದ ಆರೋಪ ಎದುರಿಸುತ್ತಿರುವ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್ ಈಶ್ವರಪ್ಪಗೆ ಸಂಕಷ್ಟ ಎದುರಾಗಿದೆ.
ಸಿಟಿ ಸಿವಿಲ್ ಕೋರ್ಟ್ ಕೆ.ಎಸ್. ಈಶ್ವರಪ್ಪಗೆ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದೆ. 2011 ರಲ್ಲಿ ಕರ್ನಾಟಕ ಬಂದ್‌ಗೆ ಈಶ್ವರಪ್ಪ ಕರೆ ನೀಡಿದ್ದರ ವಿರುದ್ಧ ವಕೀಲ ಧರ್ಮಪಾಲ್ ಖಾಸಗಿ ದೂರು ದಾಖಲಿಸಿದ್ದರು.
ಬಿಎಸ್ ಯಡಿಯೂರಪ್ಪ ಸಿಎಂ ಕುರ್ಚಿಯಿಂದ ಇಳಿದಾಗ ಕರ್ನಾಟಕ ಬಂದ್‌ಗೆ ಈಶ್ವರಪ್ಪ ಕರೆ ನೀಡಿದ್ದರು ಎನ್ನಲಾಗಿದೆ. ಈ ಹಿಂದೆ ಪ್ರಕರಣದ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಕೋರ್ಟ್ ನೊಟೀಸ್ ನೀಡಿತ್ತು.
ಅನೇಕ ಬಾರಿ ನೊಟೀಸ್ ನೀಡಿದರೂ ಈಶ್ವರಪ್ಪ ಪ್ರತಿಕ್ರಿಯೆ ನೀಡಿಲ್ಲ . ಹೀಗಾಗಿ ಸಿಟಿ ಸಿವಿಲ್ ಕೋರ್ಟ್‌ನ ವಿಶೇಷ ನ್ಯಾಯಾಲಯ ಇಂದು ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದೆ.
