ಬೆಂಗಳೂರು, [ಜ.10]: ಬೇಲೆಕೇರಿ ಅದಿರು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕರಾದ ಆನಂದ್ ಸಿಂಗ್ ಹಾಗೂ ನಾಗೇಂದ್ರ ವಿರುದ್ಧ ನಾನ್ ಬೇಲೆಬಲ್ ವಾರಂಟ್ ಜಾರಿಯಾಗಿದೆ.

ವಿಜಯನಗರ ಕ್ಷೇತ್ರದ ಶಾಸಕ ಆನಂದ್ ಸಿಂಗ್, ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಶಾಸಕ ಬಿ.ನಾಗೇಂದ್ರ ಅವರ ವಿರುದ್ಧ ಗುರುವಾರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲ ಜಾಮೀನು ರಹಿತ ವಾರೆಂಟ್ ಜಾರಿಗೊಳಿಸಿದೆ.

ಬಂಧನ ಭೀತಿಯಿಂದ ಕೈ ಶಾಸಕರಿಗೆ ರಿಲೀಫ್

ಬೇಲೆಕೇರಿ ಅದೀರು ನಾಪತ್ತೆ ಪ್ರಕರಣದಲ್ಲಿ ಹಲವು ಬಾರಿ ಸಮನ್ಸ್ ಜಾರಿ ಮಾಡಿದ್ದರೂ  ಆನಂದ್ ಸಿಂಗ್ ಹಾಗೂ ನಾಗೇಂದ್ರ ಅವರು ಕೋರ್ಟ್ ಗೆ ಗೈರಾಗಿದ್ದಾರೆ.

ಇಬ್ಬರು ಕಾಂಗ್ರೆಸ್ ಶಾಸಕರ ವಿರುದ್ಧ ಜಾಮೀನುರಹಿತ ವಾರಂಟ್‌

ಇದ್ರಿಂದ ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನ್ಯಾಯಾಧೀಶ ಬಿ.ವಿ.ಪಾಟೀಲ್ ಅವರು ಈ ಇಬ್ಬರಿಗೆ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದ್ದಾರೆ.

ಈ ಇಬ್ಬರು ಶಾಸಕರಿಗೆ ಇದೇ ಪ್ರಕರಣದಲ್ಲಿ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿರುವುದು ಇದೇನು  ಮೊದಲಲ್ಲ. ಈ ಹಿಂದೆಯೂ ಇವರ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿಗಾಗಿದೆ.