ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಬಿಟ್ಟು ಉಳಿದ ನಾಯಕರು ತಮ್ಮ ಸ್ವಕ್ಷೇತ್ರದಿಂದಲೇ ಸ್ಪರ್ಧಿಸಲಿದ್ದಾರೆ. ಒಂದು ವೇಳೆ ಕೇಂದ್ರದಿಂದ ಸೂಚನೆ ಬಂದರೆ ಮಾತ್ರ ಬೇರೆ ಕ್ಷೇತ್ರಗಳಿಂದ ಸ್ಪರ್ಧೆ ಮಾಡಲಿದ್ದಾರೆ ಎಂದು ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.

ವಿಜಯಪುರ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಬಿಟ್ಟು ಉಳಿದ ನಾಯಕರು ತಮ್ಮ ಸ್ವಕ್ಷೇತ್ರದಿಂದಲೇ ಸ್ಪರ್ಧಿಸಲಿದ್ದಾರೆ. ಒಂದು ವೇಳೆ ಕೇಂದ್ರದಿಂದ ಸೂಚನೆ ಬಂದರೆ ಮಾತ್ರ ಬೇರೆ ಕ್ಷೇತ್ರಗಳಿಂದ ಸ್ಪರ್ಧೆ ಮಾಡಲಿದ್ದಾರೆ ಎಂದು ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ರಾಷ್ಟ್ರೀಯ ಮುಖಂಡರು ಆ ಬಗ್ಗೆ ಏನನ್ನೂ ಕೇಳಿಲ್ಲ. ಬಿಜೆಪಿಯ ಎಲ್ಲ ನಾಯಕರು ಕ್ಷೇತ್ರ ಬದಲಾವಣೆ ಮಾಡುವರೆಂಬ ವದಂತಿ ಮಾಧ್ಯಮಗಳ ಸೃಷ್ಟಿಯಾಗಿದ್ದು, ಸತ್ಯಕ್ಕೆ ದೂರವಾದದ್ದು ಎಂದರು.

ಮುಂದಿನ ಐದು ವರ್ಷಕ್ಕಲ್ಲ 500 ವರ್ಷಕ್ಕೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಲಿದ್ದಾರೆ ಬಿಡಿ ಎಂದು ವ್ಯಂಗ್ಯವಾಡಿದ ಅವರು, ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂದು ಸಿದ್ದರಾಮಯ್ಯ ತಿರುಕನ ಕನಸು ಕಾಣುತ್ತಿದ್ದಾರೆ. ಮೊದಲು ಸಿದ್ದರಾಮಯ್ಯನವರು ಯಾವುದಾದರೂ ಕ್ಷೇತ್ರದಿಂದ ಗೆದ್ದು ಬರಲಿ. ಆ ಮೇಲೆ ಕನಸು ಕಾಣಲಿ ಎಂದರು.