ಬೆಂಗಳೂರು: ಕಾಂಗ್ರೆಸ್ ಪಕ್ಷ ಅಖಂಡ ಕರ್ನಾಟಕದ ಪರವಿದೆ. ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಹೆಚ್ಚಿನ ಸ್ಥಾನಗಳನ್ನು ಉತ್ತರ ಕರ್ನಾಟಕಕ್ಕೆ ನೀಡಲಾಗುವುದು. 

ಸಮ್ಮಿಶ್ರ ಸರ್ಕಾರ ಇಡೀ ರಾಜ್ಯದ ಸಮಗ್ರ ಅಭಿವೃದ್ಧಿ ದೃಷ್ಟಿ ಕೋನದೊಂದಿಗೆ ಕೆಲಸ ಮಾಡುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಎಂದಿದ್ದಾರೆ. 

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸಮ್ಮಿಶ್ರ ಸರ್ಕಾರದ ಆಡಳಿತದ ವೈಖರಿಯಿಂದ ಪ್ರತ್ಯೇಕ ರಾಜ್ಯದ ಕೂಗು ಉದ್ಭವಿಸಿದೆ ಎಂಬ ವಾದವನ್ನು ಅಲ್ಲಗಳೆದ ಅವರು, ಸಮ್ಮಿಶ್ರ ಸರ್ಕಾರವು ಸಮಗ್ರ ಕರ್ನಾಟಕದ ಅಭಿವೃದ್ಧಿಗಾಗಿ ಕೆಲಸ ಮಾಡುತ್ತಿದೆ ಎಂದರು.