ಪ್ರಮುಖ ನದಿಗಳಾದ ಕೋಸಿ, ಮಹಾನಂದ, ಗಂಡಕ್, ಬಾಗ್ಮತಿ ನದಿಗಳು ಅಪಾಯಮಟ್ಟ ಮೀರಿ ಹರಿಯುತ್ತಿದ್ದು, ರಕ್ಷಣಾ ಪಡೆಗಳಿಂದ ಕಾರ್ಯಾಚರಣೆ ಮುಂದುವರೆದಿದೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ವೈಮಾನಿಕ ಸಮೀಕ್ಷೆ ನಡೆಸಿ, ಅಗತ್ಯ ಕ್ರಮಕೈಗೊಳ್ಳುವ ಭರವಸೆ ನೀಡಿದರು.
ಈಶಾನ್ಯ ರಾಜ್ಯಗಳ ಜನರ ಬದುಕು ಮೂರಾಬಟ್ಟೆಯಾಗಿದೆ. ವರುಣನ ಅಬ್ಬರಕ್ಕೆ ಬಿಹಾರ ಹಾಗೂ ಅಸ್ಸಾಂ ರಾಜ್ಯಗಳು ಅಕ್ಷರಶಃ ನಲುಗಿ ಹೋಗಿವೆ. ಪ್ರವಾಹ ಭೀತಿ ಎದುರಾಗಿದ್ದು, ಅಪಾರ ಸಾವು-ನೋವು ಸಂಭವಿಸಿದೆ.
ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಈಶಾನ್ಯ ರಾಜ್ಯ ಜನ್ರ ಬದುಕು ಮೂರಾಬಟ್ಟೆಯಾಗಿದೆ. ಬಿಹಾರದಲ್ಲಿ ಭೀಕರ ಪ್ರವಾಹ ಎದುರಾಗಿದ್ದು, 15ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಸುಮಾರು 20 ಲಕ್ಷ ಜನರು ಬೀದಿಗೆ ಬಿದ್ದಿದ್ದಾರೆ.
ಪ್ರಮುಖ ನದಿಗಳಾದ ಕೋಸಿ, ಮಹಾನಂದ, ಗಂಡಕ್, ಬಾಗ್ಮತಿ ನದಿಗಳು ಅಪಾಯಮಟ್ಟ ಮೀರಿ ಹರಿಯುತ್ತಿದ್ದು, ರಕ್ಷಣಾ ಪಡೆಗಳಿಂದ ಕಾರ್ಯಾಚರಣೆ ಮುಂದುವರೆದಿದೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ವೈಮಾನಿಕ ಸಮೀಕ್ಷೆ ನಡೆಸಿ, ಅಗತ್ಯ ಕ್ರಮಕೈಗೊಳ್ಳುವ ಭರವಸೆ ನೀಡಿದರು.
ಇತ್ತ ಅಸ್ಸಾಂನಲ್ಲೂ ವರುಣನ ಅಬ್ಬರಕ್ಕೆ 21 ಜಿಲ್ಲೆಗಳು ಜಲಾವೃತಗೊಂಡಿದ್ದು, ಈವರೆಗೆ 100ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. 23 ಲಕ್ಷ ಜನರ ಬದುಕು ಅತಂತ್ರವಾಗಿದೆ. ಕಾಜೀರಂಗ ರಾಷ್ಟ್ರೀಯ ಉದ್ಯಾನ ಬಹುತೇಕ ಜಲಾವೃತಗೊಂಡಿದೆ. ನಾಗೋನ್‌ನಲ್ಲಿ ನೀರಿನ ಒತ್ತಡಕ್ಕೆ ಸೇತುವೆಯೊಂದು ಕೊಚ್ಚಿ ಹೋಗುವ ದೃಶ್ಯ ಪ್ರವಾಹದ ಭೀಕರತೆಗೆ ಸಾಕ್ಷಿಯಾಗಿದೆ.
ಅಸ್ಸಾಂ ಸಿಎಂ ಸರ್ಬಾನಂದ ಸೋನೋವಾಲ್ ಪ್ರವಾಹ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪ್ರಧಾನಿ ಮೋದಿ, ಎರಡು ರಾಜ್ಯಗಳಿಂದ ಮಾಹಿತಿ ಪಡೆದಿದ್ದು, ನೆರವು ನೀಡುವ ಭರವಸೆ ನೀಡಿದ್ದಾರೆ.