ಅಪಘಾತಕ್ಕೀಡಾದ ಭಾರತೀಯ ಸೇನೆಗೆ ಸೇರಿದ ಹೆಲಿಕಾಪ್ಟರ್‌| ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಹೆಲಿಕಾಪ್ಟರ್ ಅಪಘಾತ| ಹೆಲಿಕಾಪ್ಟರ್‌ನಲ್ಲಿದ್ದ ಸೇನೆಯ ಉತ್ತರ ವಿಭಾಗದ ಕಮಾಂಡರ್ ಲೆ.ಜ. ರಣ್‌ಬೀರ್ ಸಿಂಗ್| ಬೇಡರ್ ಪ್ರದೇಶದಲ್ಲಿ ತಾಂತ್ರಿಕ ದೋಷಗಳಿಂದ ಹೆಲಿಕಾಪ್ಟರ್ ಅಪಘಾತ| ಲೆ.ಜ. ರಣ್‌ಬೀರ್ ಸಿಂಗ್ ಸೇರಿದಂತೆ ಇತರ ಅಧಿಕಾರಿಗಳಿಗೆ ಸಣ್ಣಪುಟ್ಟ ಗಾಯ| ಎಲ್ಲ ಅಧಿಕಾರಿಗಳೂ ಪ್ರಾಣಾಪಾಯದಿಂದ ಪಾರು| 

ಶ್ರೀನಗರ(ಅ.24): ಭಾರತೀಯ ಸೇನೆಗೆ ಸೇರಿದ ಹೆಲಿಕಾಪ್ಟರ್‌ವೊಂದು ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಅಪಘಾತಕ್ಕೀಡಾಗಿದ್ದು, ಸೇನೆಯ ಉತ್ತರ ವಿಭಾಗದ ಕಮಾಂಡರ್ ಲೆ.ಜ. ರಣ್‌ಬೀರ್ ಸಿಂಗ್ ಅಪಾಯದಿಂದ ಪಾರಾಗಿದ್ದಾರೆ.

Scroll to load tweet…


ಪೂಂಚ್ ಜಿಲ್ಲೆಯ ಬೇಡರ್ ಪ್ರದೇಶದಲ್ಲಿ ತಾಂತ್ರಿಕ ದೋಷಗಳಿಂದ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿದ್ದು, ಹೆಲಿಕಾಪ್ಟರ್‌ನಲ್ಲಿದ್ದ ಲೆ.ಜ. ರಣ್‌ಬೀರ್ ಸಿಂಗ್ ಸೇರಿದಂತೆ ಇತರ ಅಧಿಕಾರಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಸೇನಾ ಮೂಲಗಳು ಖಚಿತಪಡಿಸಿವೆ.

Scroll to load tweet…

ಹೆಲಿಕಾಪ್ಟರ್ ಅಪಘಾತಕ್ಕೀಡಾದ ಸ್ಥಳಕ್ಕೆ ಕೂಡಲೇ ಧಾವಿಸಿದ ರಕ್ಷಣಾ ತಂಡ, ಲೆ.ಜ. ರಣ್‌ಬೀರ್ ಸಿಂಗ್ ಸೇರಿದಂತೆ ಇತರ ಅಧಿಕಾರಿಗಳು ರಕ್ಷಿಸಿದೆ. ಎಲ್ಲಾ ಅಧಿಕಾರಿಗಳನ್ನು ಸೇನಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಯಾವುದೇ ಅಪಾಯವಿಲ್ಲ ಎಂದು ಸೇನಾ ಮೂಲಗಳು ತಿಳಿಸಿವೆ.