ಫೈಜ್‌ಪುರ (ಮಹಾರಾಷ್ಟ್ರ): ‘ಸ್ವಾತಂತ್ರ್ಯ ಸಂಗ್ರಾಮದಲ್ಲಿ ಬಿಜೆಪಿ ಹಾಗೂ ಆರೆಸ್ಸೆಸ್‌ ನಾಯಕರ ಮನೆಯ ಒಂದು ನಾಯಿಯೂ ಸತ್ತಿಲ್ಲ’ ಎಂಬ ವಿವಾದಿತ ಹೇಳಿಕೆಯನ್ನು ಲೋಕಸಭೆಯ ಕಾಂಗ್ರೆಸ್‌ ನಾಯಕ ಮಲ್ಲಿಕಾರ್ಜುನ ಖರ್ಗೆ ಪುನರುಚ್ಚರಿಸಿದ್ದಾರೆ.

"

ಗುರುವಾರ ಕಾಂಗ್ರೆಸ್‌ ಜನಸಂಘರ್ಷ ಯಾತ್ರೆಯಲ್ಲಿ ಮಾತನಾಡಿದ ಅವರು, ‘ಕಾಂಗ್ರೆಸ್ಸಿಗರು ದೇಶಕ್ಕೆ ತ್ಯಾಗ ಮಾಡಿದ್ದಾರೆ. ಇಂದಿರಾ ಗಾಂಧಿ, ರಾಜೀವ್‌ ಗಾಂಧಿ ಪ್ರಾಣಾರ್ಪಣೆ ಮಾಡಿದ್ದಾರೆ. ಆದರೆ ಬಿಜೆಪಿ, ಆರೆಸ್ಸೆಸ್‌ ಮನೆಗಳ ಒಂದು ನಾಯಿಯಾದರೂ ಸ್ವಾತಂತ್ರ್ಯಕ್ಕಾಗಿ ಸತ್ತಿದೆಯೇ?’ ಎಂದು ಪ್ರಶ್ನಿಸಿದರು.

8 ತಿಂಗಳ ಹಿಂದೆ ಖರ್ಗೆ ಇದೇ ಮಾತನ್ನು ಲೋಕಸಭೆಯಲ್ಲಿ ಆಡಿದ್ದಾಗ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಆಕ್ರೋಶ ವ್ಯಕ್ತಪಡಿಸಿದ್ದರು.

ಕಾಂಗ್ರೆಸ್ ಮುಖಂಡರ ಈ ಹೇಳಿಕೆಗೆ ಬಿಜೆಪಿಯಿಂದ ತೀವ್ರ ವಿರೋದ ವ್ಯಕ್ತವಾಗಿದೆ.