ಪಕ್ಷದ ಏಳಿಗೆಗಾಗಿ ಕಾರ್ಯಕರ್ತನಾಗಿ ದುಡಿದಿದ್ದೇನೆ. ಹೀಗಿರುವಾಗ ನಾನು ಬಿಜೆಪಿ ತೊರೆದು ಜೆಡಿಎಸ್ ಸೇರುವ ಪ್ರಶ್ನೆಯೇ ಇಲ್ಲ
ತುಮಕೂರು(ಜ.8): ಬಿಜೆಪಿ ತೊರೆದು ಜೆಡಿಎಸ್ ಸೇರುವುದಾಗಿ ಹಬ್ಬಿರುವ ವಿಷಯ ಕೇವಲ ವದಂತಿಯಷ್ಟೇ ಎಂದು ಮಾಜಿ ಸಚಿವ ಹಾಗೂ ಬಿಜೆಪಿ ಮುಖಂಡ ಸೊಗಡು ಶಿವಣ್ಣ ಸ್ಪಷ್ಟಪಡಿಸಿದ್ದಾರೆ. ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜನಸಂಘದ ಕಾಲದಿಂದಲೂ ಬಿಜೆಪಿಯಲ್ಲಿದ್ದೇನೆ. ತುರ್ತು ಪರಿಸ್ಥಿತಿ ವಿರೋಸಿ ವಾಜಪೇಯಿ, ಆಡ್ವಾಣಿ ಹಾಗೂ ದೇವೇಗೌಡರ ಜೊತೆ ಜೈಲು ವಾಸ ಅನುಭವಿಸಿದ್ದೇನೆ. ಪಕ್ಷದ ಏಳಿಗೆಗಾಗಿ ಕಾರ್ಯಕರ್ತನಾಗಿ ದುಡಿದಿದ್ದೇನೆ. ಹೀಗಿರುವಾಗ ನಾನು ಬಿಜೆಪಿ ತೊರೆದು ಜೆಡಿಎಸ್ ಸೇರುವ ಪ್ರಶ್ನೆಯೇ ಇಲ್ಲ ಎಂದರು. ಮಾಜಿ ಸಿಎಂ ಯಡಿಯೂರಪ್ಪರವರೇ ನಮ್ಮ ನಾಯಕರು. ನಾನು ಬಿಎಸ್‌ವೈ ಬಗ್ಗೆ ಎಲ್ಲೂ ಟೀಕೆ ಮಾಡಿಲ್ಲ, ಮುಂದಿನ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಸಿಗುವ ವಿಶ್ವಾಸವಿದೆ ಎಂದು ಹೇಳಿದರು.
