ನಾನು ರಾಜಕೀಯ ಜೀವನದಲ್ಲಿ ಜನರಿಂದ ಮುಂದೆ ಬರುತ್ತೇನೆಯೇ ಹೊರತು ಹಿಂಬಾಗಿಲಿನಿಂದ ರಾಜಕಾರಣ ಮಾಡುವುದಿಲ್ಲ. ಕುಟುಂಬದಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದರು.

ರಾಯಚೂರು(ಡಿ.05): ನನಗೆ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಇಚ್ಛೆಯಿಲ್ಲ, ಪಕ್ಷದ ಹಿರಿಯರು ಸೂಚನೆ ನೀಡಿದರೆ ಮಾತ್ರ ವಿಧಾನ ಸಭೆಗೆ ಸ್ಪರ್ಧಿಸುತ್ತೇನೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇಲ್ಲದಿದ್ದರೆ ಪಕ್ಷ ಸಂಘಟನೆಯಲ್ಲಿ ಪ್ರಾಮಾಣಿಕವಾಗಿ ತೊಡಗಿಕೊಳ್ಳುತ್ತೇನೆ ಎಂದು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರಜ್ವಲ್ ರೇವಣ್ಣ ತಿಳಿಸಿದ್ದಾರೆ. ಸಿಂಧನೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ರಾಜಕೀಯ ಜೀವನದಲ್ಲಿ ಜನರಿಂದ ಮುಂದೆ ಬರುತ್ತೇನೆಯೇ ಹೊರತು ಹಿಂಬಾಗಿಲಿನಿಂದ ರಾಜಕಾರಣ ಮಾಡುವುದಿಲ್ಲ. ಕುಟುಂಬದಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದರು.