ವಿಶ್ವಕರ್ಮ ಜನಾಂಗವನ್ನು ಎಸ್ಟಿಗೆ ಸೇರಿಸುವ ಕುರಿತು ರಾಜ್ಯ ಸರ್ಕಾರ ನೀಡುತ್ತಿರುವ ಹೇಳಿಕೆಯು ಕೇವಲ ರಾಜಕೀಯ ಪ್ರೇರಿತವಾದುದು ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಲೇವಡಿ ಮಾಡಿದ್ದಾರೆ.

ಬೆಂಗಳೂರು: ವಿಶ್ವಕರ್ಮ ಜನಾಂಗವನ್ನು ಎಸ್ಟಿಗೆ ಸೇರಿಸುವ ಕುರಿತು ರಾಜ್ಯ ಸರ್ಕಾರ ನೀಡುತ್ತಿರುವ ಹೇಳಿಕೆಯು ಕೇವಲ ರಾಜಕೀಯ ಪ್ರೇರಿತವಾದುದು ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಲೇವಡಿ ಮಾಡಿದ್ದಾರೆ.

ಭಾನುವಾರ ಪಕ್ಷದ ಕಚೇರಿಯಲ್ಲಿ ನಡೆದ ವಿಶ್ವಕರ್ಮ ಜಯಂತಿ ಉದ್ಘಾಟಿಸಿ ಮಾತನಾಡಿದ ಅವರು, ವಿಶ್ವಕರ್ಮ ಜನಾಂಗವನ್ನು ಎಸ್‌ಟಿಗೆ ಸೇರಿಸುತ್ತೇವೆ ಎಂಬ ಮಾತನ್ನು ಸರ್ಕಾರ ಹೇಳುತ್ತಿದೆ. ಆದರೆ ಅದು ಸಾಧ್ಯವಾಗುವುದಿಲ್ಲ. ಕೇವಲ ವೋಟ್ ಬ್ಯಾಂಕ್ ರಾಜಕೀಯವಾಗಿದ್ದು, ವಿಶ್ವಕರ್ಮ ಜನಾಂಗವನ್ನು ಎಸ್‌ಟಿಗೆ ಸೇರಿಸುವ ಉದ್ದೇಶ ಸರ್ಕಾರಕ್ಕೆ ಇಲ್ಲ. ತಾಂತ್ರಿಕವಾಗಿ ಅದು ಸಾಧ್ಯವೂ ಇಲ್ಲ ಎಂದು ಹೇಳಿದರು.