ಸಚಿವ ಅನಂತಕುಮಾರ್‌ ವಿರುದ್ಧ ಕಾಂಗ್ರೆಸ್‌ ಹಕ್ಕುಚ್ಯುತಿ ನೋಟಿಸ್‌

First Published 7, Apr 2018, 10:58 AM IST
Notice To Ananth Kumar
Highlights

ಕಾಂಗ್ರೆಸ್‌ ನಾಯಕರಾದ ಸೋನಿಯಾ ಗಾಂಧಿ ಹಾಗೂ ರಾಹುಲ್‌ ಗಾಂಧಿ ಲೋಕಸಭೆಯ ಕಲಾಪ ನಡೆಸಲು ಬಿಡುತ್ತಿಲ್ಲ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಅನಂತಕುಮಾರ್‌ ಅವರು ಸದನದಲ್ಲಿ ಆರೋಪಿಸಿದ್ದಕ್ಕೆ ಸಿಟ್ಟಾಗಿರುವ ಕಾಂಗ್ರೆಸ್‌ ಪಕ್ಷ ಅವರ ವಿರುದ್ಧ ಹಕ್ಕುಚ್ಯುತಿ ನೋಟಿಸ್‌ ನೀಡಿದೆ.

ನವದೆಹಲಿ : ಕಾಂಗ್ರೆಸ್‌ ನಾಯಕರಾದ ಸೋನಿಯಾ ಗಾಂಧಿ ಹಾಗೂ ರಾಹುಲ್‌ ಗಾಂಧಿ ಲೋಕಸಭೆಯ ಕಲಾಪ ನಡೆಸಲು ಬಿಡುತ್ತಿಲ್ಲ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಅನಂತಕುಮಾರ್‌ ಅವರು ಸದನದಲ್ಲಿ ಆರೋಪಿಸಿದ್ದಕ್ಕೆ ಸಿಟ್ಟಾಗಿರುವ ಕಾಂಗ್ರೆಸ್‌ ಪಕ್ಷ ಅವರ ವಿರುದ್ಧ ಹಕ್ಕುಚ್ಯುತಿ ನೋಟಿಸ್‌ ನೀಡಿದೆ.

ಕಾಂಗ್ರೆಸ್‌ ಸಂಸದ ಕೆ.ಸಿ.ವೇಣುಗೋಪಾಲ್‌ ಅವರು ಶುಕ್ರವಾರ ಲೋಕಸಭೆಯ ಸ್ಪೀಕರ್‌ಗೆ ಹಕ್ಕುಚ್ಯುತಿ ನೋಟಿಸ್‌ ಸಲ್ಲಿಸಿದರು. ‘ಕೇಂದ್ರ ಸರ್ಕಾರಕ್ಕೆ ಕಲಾಪ ನಡೆಸಲು ಆಸಕ್ತಿಯಿಲ್ಲ. ಆದರೆ, ಸೋನಿಯಾ ಗಾಂಧಿ ಮತ್ತು ರಾಹುಲ್‌ ಗಾಂಧಿ ಕಲಾಪ ನಡೆಸಲು ಬಿಡುತ್ತಿಲ್ಲ ಎಂದು ಪದೇಪದೇ ಹೇಳುವ ಮೂಲಕ ಅವರು ಸದನದ ದಾರಿ ತಪ್ಪಿಸಿದ್ದಾರೆ. ಅಷ್ಟೇ ಅಲ್ಲ ಅವರು ಈ ದೇಶದ ಜನರನ್ನೂ ತಪ್ಪು ದಾರಿಗೆಳೆದಿದ್ದಾರೆ. ಹೀಗಾಗಿ ಅವರ ವಿರುದ್ಧ ಹಕ್ಕುಚ್ಯುತಿ ಮಂಡನೆ ಮಾಡುತ್ತಿದ್ದೇವೆ’ ಎಂದು ನೋಟಿಸ್‌ನಲ್ಲಿ ಹೇಳಲಾಗಿದೆ.

ಕಾಂಗ್ರೆಸ್‌ ಪಕ್ಷವೂ ಸೇರಿದಂತೆ ಎಲ್ಲಾ ವಿರೋಧ ಪಕ್ಷಗಳೂ ಸರ್ಕಾರದ ವಿರುದ್ಧ ಸಲ್ಲಿಕೆಯಾಗಿರುವ ಅವಿಶ್ವಾಸ ನಿಲುವಳಿ ಹಾಗೂ ಇತರ ಪ್ರಮುಖ ವಿಚಾರಗಳ ಬಗ್ಗೆ ಚರ್ಚಿಸಲು ಉತ್ಸುಕವಾಗಿವೆ. ಆದರೆ, ಸರ್ಕಾರಕ್ಕೆ ಅದರಲ್ಲಿ ಆಸಕ್ತಿಯೇ ಇಲ್ಲ. ಬದಲಿಗೆ, ಸಂಸದೀಯ ವ್ಯವಹಾರಗಳ ಸಚಿವರು ಉದ್ದೇಶಪೂರ್ವಕವಾಗಿ ಸದನವನ್ನು ದಾರಿತಪ್ಪಿಸುತ್ತಿದ್ದಾರೆ ಎಂದು ವೇಣುಗೋಪಾಲ್‌ ಹೇಳಿದ್ದಾರೆ.

loader