ಅನಂತ್ ಕುಮಾರ್ ಹೆಗ್ಡೆ – ಸಿಟಿ ರವಿಗೆ ನೋಟಿಸ್

First Published 9, Mar 2018, 11:14 AM IST
Notice To Anath Kumar Hegde And CT Ravi
Highlights

ಟಿಪ್ಪು ಸುಲ್ತಾನ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿ, ರಾಜ್ಯದಲ್ಲಿ ಕೋಮು ಸೌಹಾರ್ದತೆ ಹಾಗೂ ಸಾಮರಸ್ಯ ಹಾಳುಮಾಡಲು ಯತ್ನಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ಹಾಗೂ ಶಾಸಕ ಸಿ.ಟಿ. ರವಿಗೆ ಹೈಕೋರ್ಟ್ ಗುರುವಾರ ನೋಟಿಸ್ ಜಾರಿಗೊಳಿಸಿದೆ.

ಬೆಂಗಳೂರು: ಟಿಪ್ಪು ಸುಲ್ತಾನ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿ, ರಾಜ್ಯದಲ್ಲಿ ಕೋಮು ಸೌಹಾರ್ದತೆ ಹಾಗೂ ಸಾಮರಸ್ಯ ಹಾಳುಮಾಡಲು ಯತ್ನಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ಹಾಗೂ ಶಾಸಕ ಸಿ.ಟಿ. ರವಿಗೆ ಹೈಕೋರ್ಟ್ ಗುರುವಾರ ನೋಟಿಸ್ ಜಾರಿಗೊಳಿಸಿದೆ.

ಹೆಗಡೆ ಹಾಗೂ ಸಿ.ಟಿ. ರವಿ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರಿ ಸಲ್ಲಿಸಿದ್ದ ಖಾಸಗಿ ದೂರನ್ನು ವಜಾಗೊಳಿಸಿದ್ದ ನಗರದ 10ನೇ ಎಸಿಎಂಎಂ ನ್ಯಾಯಾಲಯದ ಆದೇಶ ಪ್ರಶ್ನಿಸಿ ಸಾಮಾಜಿಕ ಕಾರ್ಯಕರ್ತ ಅಲಂ ಪಾಷಾ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿ ವಿಚಾರಣೆ ನ್ಯಾಯಮೂರ್ತಿ  ಬೂದಿಹಾಳ್ ಅವರಿದ್ದ ಏಕಸದಸ್ಯ ಪೀಠ, ಹೆಗಡೆ ಹಾಗೂ ರವಿಗೆ ಉತ್ತರಿಸುವಂತೆ ನೋಟಿಸ್ ನೀಡಿತು.

loader