ಫೇಸ್‌ಬುಕ್‌ ಬಳಕೆದಾರರ ವೈಯಕ್ತಿಕ ಮಾಹಿತಿ ಸೋರಿಕೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂಬ್ರಿಜ್‌ ಅನಾಲಿಟಿಕಾ ಕಂಪನಿಗೆ ಕೇಂದ್ರ ಸರ್ಕಾರ ಶುಕ್ರವಾರ ನೋಟಿಸ್‌ ಜಾರಿ ಮಾಡಿದೆ.

ನವದೆಹಲಿ (ಮಾ.24): ಫೇಸ್‌ಬುಕ್‌ ಬಳಕೆದಾರರ ವೈಯಕ್ತಿಕ ಮಾಹಿತಿ ಸೋರಿಕೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂಬ್ರಿಜ್‌ ಅನಾಲಿಟಿಕಾ ಕಂಪನಿಗೆ ಕೇಂದ್ರ ಸರ್ಕಾರ ಶುಕ್ರವಾರ ನೋಟಿಸ್‌ ಜಾರಿ ಮಾಡಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಭಾರತದ ಬಳಕೆದಾರರ ದತ್ತಾಂಶಗಳನ್ನು ಬಳಕೆಮಾಡಿಕೊಂಡ ಆರೋಪ ಎದುರಿಸುತ್ತಿರುವ ಸಂಸ್ಥೆಗಳ ಬಗ್ಗೆ ಮಾಹಿತಿ ನೀಡುವಂತೆ ಸೂಚಿಸಿದೆ. ಈ ಸಂಬಂಧ ಆರು ನಿರ್ದಿಷ್ಟಪ್ರಶ್ನೆಗಳಿಗೆ ಮಾ.31ರ ಒಳಗಾಗಿ ಉತ್ತರಿಸುವಂತೆ ಸರ್ಕಾರ ತಿಳಿಸಿದೆ. ಒಂದು ವೇಳೆ ಸೂಕ್ತ ಉತ್ತರ ನೀಡದೇ ಇದ್ದರೆ ಮಾಹಿತಿ ಮತ್ತು ತಂತ್ರಜ್ಞಾನ ಸಚಿವಾಲಯದಿಂದ ಕಾನೂನು ಕ್ರಮ ಜರುಗಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದೆ.