ವಿದ್ವತ್ ಮೇಲೆ ಹಲ್ಲೆ ಪ್ರಕರಣ : ಮಲ್ಯ ಆಸ್ಪತ್ರೆ ವೈದ್ಯಗೆ ನೋಟಿಸ್

First Published 10, Mar 2018, 12:52 PM IST
Notice To Mallya Hospital Doctors
Highlights

ನಲಪಾಡ್ ಹ್ಯಾರಿಸ್ ವಿದ್ವತ್ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲ್ಯ ಆಸ್ಪತ್ರೆ ವೈದ್ಯ ಡಾ. ಆನಂದ್ ಸಿಂಗ್’ಗೆ ಸಿಸಿಬಿ ನೋಟಿಸ್ ನೀಡಿದೆ. ಈ ಪ್ರಕರಣದ ಬಗ್ಗೆ ಮಾಧ್ಯಮಗಳಿಗೆ ಮಾಹಿತಿಯನ್ನು ಬಹಿರಂಗ ಮಾಡಿದ ಹಿನ್ನೆಲೆಯಲ್ಲಿ ನೋಟಿಸ್ ಜಾರಿಯಾಗಿದೆ.

ಬೆಂಗಳೂರು : ನಲಪಾಡ್ ಹ್ಯಾರಿಸ್ ವಿದ್ವತ್ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲ್ಯ ಆಸ್ಪತ್ರೆ ವೈದ್ಯ ಡಾ. ಆನಂದ್ ಸಿಂಗ್’ಗೆ ಸಿಸಿಬಿ ನೋಟಿಸ್ ನೀಡಿದೆ. ಈ ಪ್ರಕರಣದ ಬಗ್ಗೆ ಮಾಧ್ಯಮಗಳಿಗೆ ಮಾಹಿತಿಯನ್ನು ಬಹಿರಂಗ ಮಾಡಿದ ಹಿನ್ನೆಲೆಯಲ್ಲಿ ನೋಟಿಸ್ ಜಾರಿಯಾಗಿದೆ.

ವಿದ್ವತ್’ಗೆ ಚಿಕಿತ್ಸೆ ನೀಡಿದ ಬಳಿಕ ಡಿಶ್ಚಾರ್ಜ್ ಮಾಡಲಾಗಿದ್ದು, ಇದರ ಸಮ್ಮರಿಯನ್ನು ಸಿಸಿಬಿಗೆ ನೀಡುವ ಮುನ್ನವೇ ಮಾಧ್ಯಮಗಳಿಗೆ ನೀಡಿದ್ದಾರೆ. ವಿದ್ವತ್ ಆರೋಗ್ಯದ ಬಗೆಗಿನ ಮಾಹಿತಿಯನ್ನು ಮಾಧ್ಯಮಕ್ಕೆ ಬಹಿರಂಗ ಮಾಡಿದ್ದೀರಿ ಎಂದು ನೋಟಿಸ್ ಜಾರಿಯಾಗಿದೆ.

ಅಲ್ಲದೇ ಈ ಪ್ರಕರಣದ ವಿಚಾರಣೆ ವೇಳೆ ಕೋರ್ಟ್’ನಲ್ಲಿಯೂ ಕೂಡ  ಡಾ. ಆನಂದ್ ಹೆಸರು ಪ್ರಸ್ತಾಪ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಸಿಸಿಬಿ ನೋಟಿಸ್ ಜಾರಿ ಮಾಡಿದ್ದು, ಅವರನ್ನು ವಿಚಾರಣೆಗೆ ಒಳಪಡಿಸುವ ಸಾಧ್ಯತೆಗಳಿದೆ.

loader