ಶರತ್ ಮಡಿವಾಳ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ತನ್ನಲ್ಲಿ ಸ್ಫೋಟಕ ಮಾಹಿತಿಯಿದೆ ಎಂದ ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಿಂದ ನೋಟಿಸ್ ಜಾರಿಮಾಡಲಾಗಿದ್ದು ವಿಚಾರಣೆಗೆ ಹಾಜರಾಗುವಂತೆ ತಿಳಿಸಲಾಗಿದೆ.
ಬಂಟ್ವಾಳ:ಶರತ್ ಮಡಿವಾಳ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ತನ್ನಲ್ಲಿ ಸ್ಫೋಟಕ ಮಾಹಿತಿಯಿದೆ ಎಂದ ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಿಂದ ನೋಟಿಸ್ ಜಾರಿಮಾಡಲಾಗಿದ್ದು ವಿಚಾರಣೆಗೆ ಹಾಜರಾಗುವಂತೆ ತಿಳಿಸಲಾಗಿದೆ.
ಕೊಲೆ ಹಿಂದಿನ ಪಿತೂರಿ ಹಾಗೂ ಕೊಲೆಗೆ ಸಂಬಂಧಿಸಿ ತನ್ನಲ್ಲಿ ಮಾಹಿತಿ ಇರುವುದಾಗಿಯೂ, ಅದನ್ನು ರಾಷ್ಟ್ರೀಯ ತನಿಖಾ ದಳ (ಎನ’ಐಏ)ದೊಂದಿಗೆ ಮಾತ್ರ ಹಂಚಿಕೊಳ್ಳುವುದಾಗಿ ಸ್ವಾಮೀಜಿ ಶುಕ್ರವಾರ ಮಂಗಳೂರಿನಲ್ಲಿ ಮಾಧ್ಯಮದ ಮುಂದೆ ಹೇಳಿಕೆ ನೀಡಿದ್ದರು.
ಈ ಹಿನ್ನೆಲೆಯಲ್ಲಿ ಜುಲೈ 17ರಂದು ಸೋಮವಾರ ಬಂಟ್ವಾಳ ನಗರ ಪೊಲೀಸ್ ತನಿಖಾಧಿಕಾರಿಯ ಮುಂದೆ ಹಾಜರಾಗುವಂತೆ ನೋಟಿಸಿನಲ್ಲಿ ಸೂಚನೆ ನೀಡಲಾಗಿದೆ.
