ತಮ್ಮ ಮುಂದಿನ ನಾಲ್ಕು ವರ್ಷಗಳ ಕಾಲ ಬಿಹಾರದಲ್ಲಿ ಈ ಯೋಜನೆ ಜಾರಿಗೊಳಿಸಲು ಪ್ರಯತ್ನಿಸುವುದಾಗಿ ತಿಳಿಸಿದ್ದಾರೆ.
ಬಿಹಾರ(ಡಿ.17): ಪ್ರಧಾನಿ ನರೇಂದ್ರ ಮೋದಿ ಸ್ಮಾರ್ಟ್ ಸಿಟಿ ಯೋಜನೆ ಜಾರಿಗೊಳಿಸಿದಂತೆ ಬಿಹಾರದಲ್ಲಿ ಸ್ಮಾರ್ಟ್ ವಿಲೇಜ್ ಯೋಜನೆ ಜಾರಿಯಾಗಲಿದೆ.
ಇಂಥ ಯೋಜನೆ ಜಾರಿಯಾಗುವ ಮೂಲಕ ಗ್ರಾಮೀಣ ಪ್ರದೇಶದವರು ಅಲ್ಲಿಯೇ ಉಳಿದು, ನಗರಕ್ಕೆ ಬರುವುದನ್ನು ತಡೆಯುವ ಪ್ರಯತ್ನ ನಡೆಸಲಾಗುತ್ತದೆ ಎಂದು ಮುಖ್ಯಮಂತ್ರಿ ನಿತೀಶ್ ಕುಮಾರ್ ಹೇಳಿದ್ದಾರೆ.
ನಾಲ್ಕನೇ ಹಂತದ ‘ನಿಶ್ಚಯ ಯಾತ್ರೆ’ಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸ್ಮಾರ್ಟ್ ಸಿಟಿ ಯೋಜನೆಗೆ ₹500 ಕೋಟಿ ನಿಗದಿ ಮಾಡಿರುವುದನ್ನು ಲೇವಡಿ ಮಾಡಿದ್ದಾರೆ. ಐದು ವರ್ಷಗಳಿಗಾಗಿ ಸ್ಮಾರ್ಟ್ ಸಿಟಿ ಯೋಜನೆಗೆ ಆ ಮೊತ್ತ ಸಾಕಾಗಲಿದೆಯೇ ಎಂದು ಪ್ರಶ್ನಿಸಿದ್ದಾರೆ. ತಮ್ಮ ಮುಂದಿನ ನಾಲ್ಕು ವರ್ಷಗಳ ಕಾಲ ಬಿಹಾರದಲ್ಲಿ ಈ ಯೋಜನೆ ಜಾರಿಗೊಳಿಸಲು ಪ್ರಯತ್ನಿಸುವುದಾಗಿ ತಿಳಿಸಿದ್ದಾರೆ.
