ಬಿಜೆಪಿ ಹೈಕಮಾಂಡ್ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಭರವಸೆ ನೀಡಿದರೆ ಆ ದಾಖಲೆ ಬಿಡುಗಡೆ ಮಾಡ್ತೀನಿ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಹೊಸ ಬಾಂಬ್​ ಸಿಡಿಸಿದ್ದಾರೆ. 

ಮೈಸೂರು (ಫೆ.26): ಕಾಂಗ್ರೆಸ್ ತನ್ನ ಹೈಕಮಾಂಡ್ ಗೆ ನೀಡಿದ ಕಪ್ಪ ಕಾಣಿಕೆ ಮಾದರಿಯಲ್ಲಿ ಬಿಜೆಪಿಯವರು ತನ್ನ ಹೈಕಮಾಂಡ್’ಗೆ ನೀಡಿದ ಕಪ್ಪ ಕಾಣಿಕೆಯ ಡೈರಿ ದಾಖಲೆ ನನ್ನ ಬಳಿ ಇದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಬಿಜೆಪಿ ಹೈಕಮಾಂಡ್ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಭರವಸೆ ನೀಡಿದರೆ ಆ ದಾಖಲೆ ಬಿಡುಗಡೆ ಮಾಡ್ತೀನಿ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಹೊಸ ಬಾಂಬ್​ ಸಿಡಿಸಿದ್ದಾರೆ. 

ಮೈಸೂರಿನ ಪಿರಿಯಾಪಟ್ಟಣದಲ್ಲಿ ಮಾತನಾಡಿದ ಅವರು, ನಾನು ಯಾವುದೇ ಕಾರಣಕ್ಕೂ ಪ್ರಚಾರಕ್ಕೆ ದಾಖಲೆ ಬಿಡುಗಡೆ ಮಾಡುವುದಿಲ್ಲ, ದಾಖಲೆ ಬಿಡುಗಡೆ ಮಾಡಿದರೆ ಕ್ರಮ ಆಗಬೇಕು ಎಂದು ಹೇಳಿದ್ದಾರೆ.