ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳಲ್ಲಿ ಧ್ವನಿ ವರ್ಧಕಗಳ ಬಳಕೆಗೆ ಖ್ಯಾತ ಕವಿ, ಗೀತೆ ರಚನಕಾರ ಜಾವೇದ್ ಅಖ್ತರ್ ಕೂಡ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ನವದೆಹಲಿ: ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳಲ್ಲಿ ಧ್ವನಿ ವರ್ಧಕಗಳ ಬಳಕೆಗೆ ಖ್ಯಾತ ಕವಿ, ಗೀತೆ ರಚನಕಾರ ಜಾವೇದ್ ಅಖ್ತರ್ ಕೂಡ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
‘ಯಾವುದೇ ಜನವಸತಿ ಪ್ರದೇಶಗಳಲ್ಲಿ ಮಸೀದಿ ಅಥವಾ ಇತರ ಧಾರ್ಮಿಕ ಸ್ಥಳಗಳಲ್ಲಿ ಧ್ವನಿ ವರ್ಧಕಗಳನ್ನು ಬಳಸಕೂಡದು ಎಂಬ ಸೋನು ನಿಗಂ ಸೇರಿದಂತೆ ಇತರರ ಅಭಿಪ್ರಾಯವನ್ನು ನಾನೂ ಸಂಪೂರ್ಣವಾಗಿ ಒಪ್ಪುತ್ತೇನೆ’ ಎಂದು ಜಾವೇದ್ ಅಖ್ತರ್ ಟ್ವೀಟ್ ಮಾಡಿದ್ದಾರೆ.
ಕಳೆದ ವರ್ಷ ಇದೇ ರೀತಿಯ ಹೇಳಿಕೆ ನೀಡಿದ್ದ ಬಾಲಿವುಡ್ ಗಾಯಕ ಸೋನು ನಿಗಂ ಭಾರೀ ಟೀಕೆಗೆ ಗುರಿಯಾಗಿದ್ದರು.

Last Updated 11, Apr 2018, 12:55 PM IST