ದೇಶದಲ್ಲಿರುವ ಸಾರ್ವಜನಿಕ ಮತ್ತು ಸಮುದಾಯ ಶೌಚಾಲಯಗಳ ಗುಣಮಟ್ಟವನ್ನು ಮೇಲ್ದರ್ಜೆಗೇರಿಸುವ ಮಹತ್ವಾಕಾಂಕ್ಷೆ ಇಟ್ಟುಕೊಂಡಿರುವ ಕೇಂದ್ರ ಸರ್ಕಾರ ಅದರ ಸಾಕಾರಕ್ಕಾಗಿ ಮತ್ತೊಂದು ಕ್ರಮಕ್ಕೆ ಮುಂದಾಗಿದೆ.

ವದೆಹಲಿ (ಡಿ.11): ದೇಶದಲ್ಲಿರುವ ಸಾರ್ವಜನಿಕ ಮತ್ತು ಸಮುದಾಯ ಶೌಚಾಲಯಗಳ ಗುಣಮಟ್ಟವನ್ನು ಮೇಲ್ದರ್ಜೆಗೇರಿಸುವ ಮಹತ್ವಾಕಾಂಕ್ಷೆ ಇಟ್ಟುಕೊಂಡಿರುವ ಕೇಂದ್ರ ಸರ್ಕಾರ ಅದರ ಸಾಕಾರಕ್ಕಾಗಿ ಮತ್ತೊಂದು ಕ್ರಮಕ್ಕೆ ಮುಂದಾಗಿದೆ.

ಸ್ವಚ್ಛ ಭಾರತದ ಆಶಯದಂತೆ ಶೌಚಾಲಯಗಳ ಗುಣಮಟ್ಟ ಕಾಪಾಡುವ ನಿಟ್ಟಿನಲ್ಲಿ ಸಾರ್ವಜನಿಕ ಮತ್ತು ಸಮುದಾಯ ಶೌಚಾಲಯಗಳ ಪ್ರವೇಶ ದ್ವಾರದಲ್ಲಿ ವಿಶೇಷ ಗುರುತಿನ ಸಂಖ್ಯೆ ಅಳವಡಿಸಲು ನಿರ್ಧರಿಸಲಾಗಿದೆ ಎಂದು ಅಧಿಕೃತ ದಾಖಲೆಗಳು ತಿಳಿಸಿವೆ.

ಇಷ್ಟೇ ಅಲ್ಲದೆ, ಶೌಚಾಲಯ ಒಳಪಡುವ ವಾರ್ಡ್ ಹೆಸರು, ಶೌಚಾಲಯದಲ್ಲಿ ಸಮಸ್ಯೆಗಳ ಪರಿಹಾರಕ್ಕಾಗಿ ಶೌಚಾಲಯದ ಉಸ್ತುವಾರಿ ವಹಿಸಿಕೊಂಡ ವ್ಯಕ್ತಿಯ ಹೆಸರು ಮತ್ತು ದೂರವಾಣಿ ಸಂಖ್ಯೆ ಸೇರಿದಂತೆ ಇತರ ಮಾಹಿತಿಗಳನ್ನು ಸಹ ಒಳಗೊಂಡಿರಲಿದೆ ಎನ್ನಲಾಗಿದೆ.

ಸ್ವಚ್ಛ ಭಾರತ ಯೋಜನೆಯಡಿ ರಾಷ್ಟ್ರಾದ್ಯಂತ ಒಟ್ಟು 2.34 ಲಕ್ಷ ಸಾರ್ವಜನಿಕ ಶೌಚಾಲಯಗಳನ್ನು ನಿರ್ಮಿಸಲಾಗಿದ್ದು, ಅವುಗಳ ಸ್ವಚ್ಛತೆ ಇದ್ದಲ್ಲಿ ಬಯಲು ಶೌಚ ರಹಿತ ಪ್ರದೇಶಗಳಾಗಿ ನಿರ್ಮಾಣ ಮಾಡಬಹುದು ಎಂಬುದು ಸರ್ಕಾರದ ಲೆಕ್ಕಾಚಾರವಾಗಿದೆ.