ಬಿಜೆಪಿ ಮೊದಲ ಪಟ್ಟಿಯಲ್ಲಿ ಎನ್.ಆರ್ ರಮೇಶ್’ ಅವರಿಗೆ ಬಿಜೆಪಿ ಟಿಕೆಟ್ ಕೈ ತಪ್ಪಿದೆ. ಈ ನಿಟ್ಟಿನಲ್ಲಿ ಅವರು ಬೆಂಗಳೂರು ನಗರ ವಕ್ತಾರ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಬೆಂಗಳೂರು : ಬಿಜೆಪಿ ಮೊದಲ ಪಟ್ಟಿಯಲ್ಲಿ ಎನ್.ಆರ್ ರಮೇಶ್’ ಅವರಿಗೆ ಬಿಜೆಪಿ ಟಿಕೆಟ್ ಕೈ ತಪ್ಪಿದೆ. ಈ ನಿಟ್ಟಿನಲ್ಲಿ ಅವರು ಬೆಂಗಳೂರು ನಗರ ವಕ್ತಾರ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಪತ್ರವನ್ನು ಬಿಎಸ್ ಯಡಿಯೂರಪ್ಪ ಅವರಿಗೆ ರವಾನಿಸಲಿದ್ದಾರೆ. 

ಟಿಕೆಟ್ ವಿಚಾರವಾಗಿ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟವಾಗಿದ್ದು, ಕೇಂದ್ರ ಸಚಿವ ಅನಂತ್ ಕುಮಾರ್ ವಿರುದ್ಧ ಬಂಡಾಯವೆದ್ದಿದ್ದಾರೆ. ಹಿಂದುಳಿದ ವರ್ಗದವರಿಗೆ ಅನಂತ್ ಕುಮಾರ್ ಅನ್ಯಾಯ ಮಾಡಿದ್ದಾರೆಂದು ರಮೇಶ್ ನೇರ ಆರೋಪ ಮಾಡಿದ್ದಾರೆ. ಅಲ್ಲದೇ ಮುಂದಿನ ಲೋಕಸಭಾ ಚುನಾವಣೆಯಲ್ಲಿ ತಕ್ಕ ಪಾಠವನ್ನು ಕಲಿಯಲಿದ್ದಾರೆ ಎಂದು ರಮೇಶ್ ಹೇಳಿದ್ದಾರೆ.