ಎನ್‌ಡಿಟೀವಿ ವಾಹಿನಿ ಸಂಸ್ಥಾಪಕ ಪ್ರಣಯ್‌ ರಾಯ್‌ ಅವರ ಮನೆ ಮತ್ತು ಕಚೇರಿಯ ಮೇಲೆ ಸಿಬಿಐ ದಾಳಿ ನಡೆಸುವ ಮೂಲಕ ಭಾರತದಲ್ಲಿ ಮೋದಿ ಸರ್ಕಾರ ಪತ್ರಿಕಾ ಸ್ವಾತಂತ್ರ್ಯವನ್ನು ಹತ್ತಿಕ್ಕಲು ಯತ್ನಿಸಿದೆ. ಇದು ಮೋದಿ ಸರ್ಕಾರದ ಅಡಿಯಲ್ಲಿ ಮಾಧ್ಯಮಗಳಿಗೆ ಹೊಸ ಆತಂಕ ಎದುರಾಗುವ ಮುನ್ಸೂಚನೆಯಾಗಿದೆ ಎಂದು ನ್ಯೂಯಾರ್ಕ್ ಟೈಮ್ಸ್‌ನ ಸಂಪಾದಕೀಯ ಟೀಕಿಸಿದೆ.
ನವದೆಹಲಿ: ಎನ್ಡಿಟೀವಿ ವಾಹಿನಿ ಸಂಸ್ಥಾಪಕ ಪ್ರಣಯ್ ರಾಯ್ ಅವರ ಮನೆ ಮತ್ತು ಕಚೇರಿಯ ಮೇಲೆ ಸಿಬಿಐ ದಾಳಿ ನಡೆಸುವ ಮೂಲಕ ಭಾರತದಲ್ಲಿ ಮೋದಿ ಸರ್ಕಾರ ಪತ್ರಿಕಾ ಸ್ವಾತಂತ್ರ್ಯವನ್ನು ಹತ್ತಿಕ್ಕಲು ಯತ್ನಿಸಿದೆ. ಇದು ಮೋದಿ ಸರ್ಕಾರದ ಅಡಿಯಲ್ಲಿ ಮಾಧ್ಯಮಗಳಿಗೆ ಹೊಸ ಆತಂಕ ಎದುರಾಗುವ ಮುನ್ಸೂಚನೆಯಾಗಿದೆ ಎಂದು ನ್ಯೂಯಾರ್ಕ್ ಟೈಮ್ಸ್ನ ಸಂಪಾದಕೀಯ ಟೀಕಿಸಿದೆ.
‘ಭಾರತದ ಮುಕ್ತ ಪತ್ರಿಕಾ ಸ್ವಾತಂತ್ರ್ಯಕ್ಕೆ ಧಕ್ಕೆ' ಎಂಬ ಶಿರ್ಷಿಕೆಯಲ್ಲಿ ಕಟು ಶಬ್ದಗಳಿಂದ ಸಂಪಾದಕೀಯ ಬರೆಯಲಾಗಿದ್ದು, ಮಾಧ್ಯಮ ಸ್ವಾತಂತ್ರ್ಯಕ್ಕೆ ಮೋದಿ ಸರ್ಕಾರದ ಬದ್ಧತೆಯನ್ನು ಪ್ರಶ್ನಿಸಲಾಗಿದೆ. ಆದರೆ, ಈ ಕುರಿತು ಮೋದಿ ಸರ್ಕಾರ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
