ನಿನ್ನೆ ಉತ್ತರ ಪ್ರದೇಶದ ಸಂಬಲ್‌ನಲ್ಲಿ ಹಮ್ಮಿಕೊಂಡಿದ್ದ ಬಿಜೆಪಿ ಪರಿವರ್ತನಾ ಸಮಾವೇಶದಲ್ಲಿ ಆಕ್ಷೇಪಾರ್ಹ ಡ್ಯಾನ್ಸ್ ಮಾಡಿದ್ದು, ವಿವಾದಕ್ಕೆ ಕಾರಣವಾಗಿದೆ. ವೇದಿಕೆ ಮೇಲೆ ಬಾರ್ ಗರ್ಲ್ ಡ್ಯಾನ್ಸ್ ಮಾಡುತ್ತಿರುವ ವಿಡಿಯೋ ವೈರಲ್ ಆಗಿದೆ. ಕಾರ್ಯಕ್ರಮದಲ್ಲಿ ಬಿಜೆಪಿ ಸ್ಥಳೀಯ ನಾಯಕರು ಹಾಜರಿದ್ದರು ಎನ್ನಲಾಗಿದೆ.

ಲಕ್ನೋ (ನ.29): ಉತ್ತರ ಪ್ರದೇಶದಲ್ಲಿ ಚುನಾವಣೆಗೆ ಎಲ್ಲ ಪಕ್ಷಗಳು ಈಗಿನಿಂದಲೇ ಸಿದ್ಧತೆ ಆರಂಭಿಸಿವೆ. ಬಿಜೆಪಿ ಕೂಡ ಚುನಾವಣೆ ಮೇಲೆ ಕಣ್ಣಿಟ್ಟು ರಾಜ್ಯಾದ್ಯಂತ ಪರಿವರ್ತನಾ ಸಮಾವೇಶ ಹಮ್ಮಿಕೊಂಡಿದೆ. ಈ ಮಧ್ಯೆ ಬಿಜೆಪಿ ಪರಿವರ್ತನಾ ಱಲಿವೊಂದು ಪಕ್ಷಕ್ಕೆ ಮುಜುಗರ ಉಂಟು ಮಾಡಿದೆ.

ನಿನ್ನೆ ಉತ್ತರ ಪ್ರದೇಶದ ಸಂಬಲ್‌ನಲ್ಲಿ ಹಮ್ಮಿಕೊಂಡಿದ್ದ ಬಿಜೆಪಿ ಪರಿವರ್ತನಾ ಸಮಾವೇಶಲ್ಲಿ ಆಕ್ಷೇಪಾರ್ಹ ಡ್ಯಾನ್ಸ್ ಮಾಡಿದ್ದು, ವಿವಾದಕ್ಕೆ ಕಾರಣವಾಗಿದೆ. ವೇದಿಕೆ ಮೇಲೆ ಬಾರ್ ಗರ್ಲ್ ಡ್ಯಾನ್ಸ್ ಮಾಡುತ್ತಿರುವ ವಿಡಿಯೋ ವೈರಲ್ ಆಗಿದೆ. ಕಾರ್ಯಕ್ರಮದಲ್ಲಿ ಬಿಜೆಪಿ ಸ್ಥಳೀಯ ನಾಯಕರು ಹಾಜರಿದ್ದರು ಎನ್ನಲಾಗಿದೆ.

ಈ ಘಟನೆ ಕುರಿತು ಪ್ರತಿಕ್ರಿಯೆ ನೀಡಲು ಬಿಜೆಪಿ ನಾಯಕರು ನಿರಾಕರಿಸಿದ್ದಾರೆ. ಈ ಹಿಂದೆ ಉತ್ತರಪ್ರದೇಶದ ಬಾಘಪತ್‌ನಲ್ಲಿ ಬಿಜೆಪಿ ಪರಿವರ್ತನಾ ಯಾತ್ರೆಯಲ್ಲಿ ಬಾರ್ ಗರ್ಲ್​ ಡ್ಯಾನ್ಸರ್‌ ಸೊಂಟ ಬಳುಕಿಸಿದ್ದು ವಿವಾದಕ್ಕೆ ಕಾರಣವಾಗಿತ್ತು. ಇದೀಗ ಮತ್ತೆ ಬಿಜೆಪಿ ವಿವಾದಕ್ಕೆ ಗುರಿಯಾಗಿದೆ.