ಅಂದು ನಡೆಯುವ ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್​ವೈ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್​ಡಿಕೆ, ಕಾಂಗ್ರೆಸ್​ ಮುಖಂಡ ಮಲ್ಲಿಕಾರ್ಜುನ ಖರ್ಗೆ, ಕೇಂದ್ರ ಸಚಿವ ಡಿವಿಎಸ್​ ಮುಂತಾದವರು ಭಾಗವಹಿಸಲಿದ್ದಾರೆ.

ಬೆಂಗಳೂರು(ಅ.19): ಮಹದಾಯಿ ನದಿ ನೀರು ಹಂಚಿಕೆ ವಿಚಾರವಾಗಿ ಅ.21ರಂದು ಮುಂಬೈನಲ್ಲಿ 3 ರಾಜ್ಯಗಳ‌ ಸಿಎಂ ಸಭೆ ನಡೆಯುವ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿ ಸಿಎಂ ನೇತೃತ್ವದಲ್ಲಿ ಸರ್ವಪಕ್ಷ ಸಭೆ ಕರೆದು ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಲಾಯಿತು.

ಅಂದು ನಡೆಯುವ ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್​ವೈ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್​ಡಿಕೆ, ಕಾಂಗ್ರೆಸ್​ ಮುಖಂಡ ಮಲ್ಲಿಕಾರ್ಜುನ ಖರ್ಗೆ, ಕೇಂದ್ರ ಸಚಿವ ಡಿವಿಎಸ್​, ವಿಪಕ್ಷ ನಾಯಕರಾದ ಜಗದೀಶ್ ಶೆಟ್ಟರ್, ಕೆ.ಎಸ್​. ಈಶ್ವರಪ್ಪ, ಸಂಸದರಾದ ಶೋಭಾ ಕರಂದ್ಲಾಜೆ, ಸಿ.ಎಸ್. ಪುಟ್ಟರಾಜು, ಪ್ರಕಾಶ್ ಹುಕ್ಕೇರಿ, ಪ್ರಹ್ಲಾದ್ ಜೋಶಿ, ಸಚಿವರಾದ ಎಂ.ಬಿ. ಪಾಟೀಲ್, ಎಚ್.ಕೆ. ಪಾಟೀಲ್, ವಿನಯ್ ಕುಲಕರ್ಣಿ, ಟಿ.ಬಿ. ಜಯಚಂದ್ರ, ಉಮಾಶ್ರೀ, ಆಂಜನೇಯ, ಶಾಸಕರಾದ, ವೈಎಸ್​ವಿ ದತ್ತ,

ಕೋನರೆಡ್ಡಿ, ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವರು ಭಾಗಿಯಾಗಲಿದ್ದಾರೆ. ಧಾರವಾಡ, ಗದಗ, ಬೆಳಗಾವಿ, ಬಾಗಲಕೋಟೆಯ ಸಂಸದರು ಸಭೆಯಲ್ಲಿ ಭಾಗವಹಿಸಲಿದ್ದಾರೆ.