Asianet Suvarna News Asianet Suvarna News

ನೈತಿಕ ಹೊಣೆ ಹೊತ್ತು ಕಾಂಗ್ರೆಸ್ ಶಾಸಕ ರಾಜೀನಾಮೆ

ಕಾಂಗ್ರೆಸ್ ಶಾಸಕರೋರ್ವರು ಇದೀಗ ಪ್ರಕರಣವೊಂದರ ಸಂಬಂಧ ನೈತಿಕ ಹೊಣೆ ಹೊತ್ತು ಇದೀಗ ತಮ್ಮ  ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅತ್ಯಾಚಾರ ಪ್ರಕರಣದಲ್ಲಿ ನ್ಯಾಯ ದೊರಕಿಸಿಕೊಡಲು ಸಾಧ್ಯವಾಗಲಿಲ್ಲವೆಂದು ತಮ್ಮ ಸ್ಥಾನ ತೊರೆದಿದ್ದಾರೆ. 

Odisha Congress MLA Resigns Rape Case
Author
Bengaluru, First Published Oct 31, 2018, 11:36 AM IST
  • Facebook
  • Twitter
  • Whatsapp

ಭುವನೇಶ್ವರ್ : ಕೊರಾಪುಟ್ ಕ್ಷೇತ್ರದ ಕಾಂಗ್ರೆಸ್ ಶಾಸಕ  ಕೃಷ್ಣ ಚಂದ ಸಗಾರಿಯಾ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. 

ಇಲ್ಲಿನ ಕುಂಡಲಿ ಪ್ರದೇಶದಲ್ಲಿ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆಗೆ ಸೂಕ್ತ ನ್ಯಾಯ ದೊರಕಿಸಿಕೊಡುವಲ್ಲಿ ವಿಫಲವಾದ ಹಿನ್ನೆಲೆಯಲ್ಲಿ  ರಾಜೀನಾಮೆ ಸಲ್ಲಿಸಿದ್ದಾರೆ. 

ಕುಂಡಲಿ ಪ್ರದೇಶದಲ್ಲಿ ಕಳೆದ ವರ್ಷ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಆತ್ಮಹತ್ಯೆ ಮಾಡಿಕೊಂಡಿದ್ದು ಈ ಪ್ರಕರಣ ನಡೆದು ಒಂದು ವರ್ಷ ಕಳೆದರೂ ಕೂಡ ಸೂಕ್ತ ರೀತಿಯಲ್ಲಿ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡಲು ಸಾಧ್ಯವಾಗಲಿಲ್ಲ . ಬಡ ದಲಿತ ಹೆಣ್ಣಿಗೆ ನ್ಯಾಯದೊರಕಿಸಿಕೊಡಲು ಸಾಧ್ಯವಿಲ್ಲದ ಮೇಲೆ ತಾವು ಈ ಸ್ಥಾನದಲ್ಲಿ ಮುಂದುವರಿಯುವುದು ನೈತಿಕತೆ ಅಲ್ಲವೆಂದು ರಾಜೀನಾಮೆ ನೀಡಿದ್ದಾಗಿ ಅವರು ಹೇಳಿದ್ದಾರೆ.

ಕಳೆದ ವರ್ಷ ಅಕ್ಟೋಬರ್ 10 ರಂದು 14 ವರ್ಷದ ಬಾಲಕಿ ಮೇಲೆ ಮುಸಾಗುಡಾ ಹಳ್ಳಿಯಲ್ಲಿ ಸಾಮೂಹಿಕ ಅತ್ಯಾಚಾರ ಎಸಗಲಾಗಿತ್ತು. ನಾಲ್ವರಿಂದ ಅತ್ಯಾಚಾರ ನಡೆದಿದ್ದು ಕಳೆದ ಜನವರಿಯಲ್ಲಿ ಈ ಬಾಲಕಿ ಆತ್ಮಹತ್ಯೆಗೆ ಶರಣಾಗಿದ್ದಳು. ಈ ಪ್ರಕರಣ ನಡೆದು ಅನೇಕ ದಿನಗಳು ಕಳೆದರೂ ಕೂಡ ಪೊಲೀಸರು ಯಾವುದೇ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳದೇ, ಓರ್ವ ಆರೋಪಿಯನ್ನೂ ಕೂಡ ಬಂಧಿಸಿರಲಿಲ್ಲ. 

Follow Us:
Download App:
  • android
  • ios