ಐಎಎಸ್ ಅಧಿಕಾರಿ ಅನುರಾಗ್ ತಿವಾರಿ ಅವರ ಸಾವಿನ ಪ್ರಕರಣದ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಲು ಸಿಎಂ ಸಿದ್ದರಾಮಯ್ಯ ಇಬ್ಬರು ಐಎಎಸ್ ಅಧಿಕಾರಿಗಳನ್ನು ಲಖನೌಗೆ ಕಳುಹಿಸಿದ್ದಾರೆ.

ಲಕ್ನೋ(ಮೇ.18): ಐಎಎಸ್ ಅಧಿಕಾರಿ ಅನುರಾಗ್ ತಿವಾರಿ ಅವರ ಸಾವಿನ ಪ್ರಕರಣದ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಲು ಸಿಎಂ ಸಿದ್ದರಾಮಯ್ಯ ಇಬ್ಬರು ಐಎಎಸ್ ಅಧಿಕಾರಿಗಳನ್ನು ಲಖನೌಗೆ ಕಳುಹಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಐಎಎಸ್ ಅಧಿಕಾರಿಗಳಾದ ಅಭಿರಾಂ ಶಂಕರ್, ಪಂಕಜ್ ಕುಮಾರ್ ಪಾಂಡೆ ಅವರನ್ನು ಲಖನೌಗೆ ಕಳುಹಿಸಿದ್ದಾರೆ. ಉತ್ತರಪ್ರದೇಶದ ರಾಜಧಾನಿ ಲಖನೌದ ರಸ್ತೆ ಬದಿಯಲ್ಲಿ ಐಎಎಸ್ ಅಧಿಕಾರಿ ಅನುರಾಗ್‌ ತಿವಾರಿ ಮೃತದೇಹ ಪತ್ತೆಯಾಗಿತ್ತು. ಉತ್ತರ ಪ್ರದೇಶ ಸರ್ಕಾರ ಮರಣೋತ್ತರ ಪರೀಕ್ಷೆ ನಡೆಸಿ ರಾಜ್ಯ ಸರ್ಕಾರಕ್ಕೆ ವರದಿ ನೀಡಿದೆ.

ತಿವಾರಿಯವರು ಹೃದಯಾಘಾತ, ತೀವ್ರ ಉಸಿರಾಟದ ತೊಂದರೆಯಿಂದ ಸಾವನ್ನಪ್ಪಿದ್ದಾರೆ ಅಂತ ರಅಜ್ಯ ಸರ್ಕಾರಕ್ಕೆ ಮಾಹಿತಿ ನೀಡಿತ್ತು. ಈ ಹಿನ್ನೆಲೆಯಲ್ಲಿ ತಿವಾರಿ ಸಾವಿನ ಪ್ರಕರಣದ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಲು ಇಬ್ಬರು ಐಎಎಸ್ ಅಧಿಕಾರಿಗಳನ್ನು ಲಖನೌಗೆ ಕಳುಹಿಸಿದ್ದಾರೆ.