ನವದೆಹಲಿ(ಜೂ.08): ಲೋಕಸಭೆ ಚುನಾವಣೆಯಲ್ಲಿ ಪಕ್ಷವನ್ನು ಗೆಲುವಿನ ದಡ ಸೇರಿಸುವಲ್ಲಿ ವಿಫಲರಾಗಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹುದ್ದೆ ತ್ಯಜಿಸಬೇಕು ಎಂದು ಮಾಜಿ ಒಲಂಪಿಕ್ ಆಟಗಾರ ಮತ್ತು ಮಾಜಿ ಕೇಂದ್ರ ಸಚಿವ ಆಗ್ರಹಿಸಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷ ಸ್ಥಾನವನ್ನು ನೆಹರೂ-ಗಾಂಧಿ ಪರಿವಾರದ ಹೊರತಾದ ವ್ಯಕ್ತಿಗೆ ನೀಡುವುದಕ್ಕೆ ಇದು ಸೂಕ್ತ ಸಮಯ ಎಂದು ಮಾಜಿ ಒಲಂಪಿಕ್ ಆಟಗಾರ ಮತ್ತು ಮಾಜಿ ಕೇಂದ್ರ ಸಚಿವ ಅಸ್ಲಮ್ ಶೇರ್ ಖಾನ್ ಅಭಿಪ್ರಾಯಪಟ್ಟಿದ್ದಾರೆ.

ಈ ಕುರಿತು ರಾಹುಲ್ ಗಾಂಧಿ ಅವರಿಗೆ ಪತ್ರ ಬರೆದಿರುವ ಅಸ್ಲಮ್ ಶೇರ್ ಖಾನ್, ಒಂದು ವೇಳೆ ರಾಹುಲ್ ಹುದ್ದೆ ತ್ಯಜಿಸುವುದಾದರೆ ಅಧ್ಯಕ್ಷ ಸ್ಥಾನದ ಜವಾಬ್ದಾರಿಯನ್ನು ತಾವು ಹೊರುವುದಾಗಿ ಸ್ಪಷ್ಟಪಡಿಸಿದ್ದಾರೆ.

ಪಕ್ಷವನ್ನು ಮತ್ತೆ ಬೇರು ಮಟ್ಟದಿಂದ ಕಟ್ಟಬೇಕಾದ ಅವಶ್ಯಕತೆ ಇದ್ದು, ಇದಕ್ಕಾಗಿ ತಾವು ಪಕ್ಷದ ಅಧ್ಯಕ್ಷ ಸ್ಥಾನವನ್ನು ಸ್ವೀಕರಿಸಲು ಸಿದ್ಧ ಎಂದಿರುವ ಅಸ್ಲಮ್, ಪತ್ರ ಬರೆದಿರುವ ಹಿಂದೆ ವೈಯಕ್ತಿಕ ಲಾಭದ ಉದ್ದೇಶ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.