48ನೇ ವಸಂತಕ್ಕೆ ಕಾಲಿಟ್ಟ ಕಾಂಗ್ರೆಸ್ ಅಧ್ಯಕ್ಷಪ್ರಧಾನಿ ಮೋದಿಯಿಂದ ಶುಭಾಷಯ ಸಲ್ಲಿಕೆಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ವಿಡಿಯೋರಾಹುಲ್ ಭಾಷಣದ ತುಣುಕುಗಳ ಮೇಲೆ ಲಘು ಹಾಸ್ಯ.

ನವದೆಹಲಿ(ಜೂ.19): ಇಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರ ೪೮ನೇ ಹುಟ್ಟುಹಬ್ಬ. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ವಿವಿಧ ಗಣ್ಯರು ರಾಹುಲ್ ಅವರಿಗೆ ಹುಟ್ಟುಹಬ್ಬದ ಶುಭಾಷಯ ತಿಳಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಪ್ರಧಾನಿ ಮೋದಿ ಟ್ವಿಟ್ ಮಾಡಿ ಧೀರ್ಘಾಯುಷ್ಯ ಮತ್ತು ಉತ್ತಮ ಆರೋಗ್ಯ ನಿಮ್ಮದಾಗಲಿ ಎಂದು ಹಾರೈಸಿದ್ದಾರೆ. ಇದೇ ವೇಳೆ ರಾಹುಲ್ ಹುಟ್ಟುಹಬ್ಬದ ಪ್ರಯುಕ್ತ ಸಾಮಾಜಿಕ ಜಾಲತಾಣಗಳಲ್ಲಿ ತರಹೇವಾರಿ ವಿಡಿಯೋಗಳು ಹರಿದಾಡುತ್ತಿವೆ.

ಲೋಕಸಭೆ ಮತ್ತು ಸಾರ್ವಜನಿಕ ಭಾಷಣಗಳಲ್ಲಿ ರಾಹುಲ್ ಅವರಿಂದ ಆದ ಯಡವಟ್ಟುಗಳ ಕುರಿತು ಫೇಸ್‌ಬುಕ್ ನಲ್ಲಿ ವಿಡಿಯೋವೊಂದು ಹರಿದಾಡುತ್ತಿದೆ. ಸಾರ್ವಜನಿಕವಾಗಿ ರಾಹುಲ್ ಹೇಗೆ ಅಪ್ರಬುದ್ದರಾಗಿ ವರ್ತಿಸುತ್ತಾರೆ ಎಂಬುದರ ಕುರಿತು ಈ ವಿಡಿಯೋದಲ್ಲಿ ಲಘು ಹಾಸ್ಯ ಮಾಡಲಾಗಿದೆ.