ಕದನ ವಿರಾಮ ಉಲ್ಲಂಘಿಸಿ ಆರ್‌ಎಸ್‌ ಪುರ ಮತ್ತು ಅರ್ನಿಯಾ ವಲಯದಲ್ಲಿ ಪಾಕಿಸ್ತಾನದ ಪಡೆಗಳು ನಡೆಸಿದ ಗುಂಡಿನ ದಾಳಿಗೆ ಗಡಿ ಭದ್ರತಾ ಪಡೆಯ ಯೋಧ ಹುತಾತ್ಮರಾಗಿದ್ದಾರೆ. ಗುಂಡಿನ ದಾಳಿಯಲ್ಲಿ ಆರು ನಾಗರಿಕರು ಗಾಯಗೊಂಡಿದ್ದಾರೆ. ಅರ್ನಿಯಾ ವಲಯದಲ್ಲಿ ಬಿಎಸ್‌ಎಫ್‌ ಯೋಧರು ನಡೆಸಿದ ಪ್ರತಿದಾಳಿಗೆ ಪಾಕಿಸ್ತಾನದ ಒಬ್ಬ ರೇಂಜರ್‌ ಸಾವನ್ನಪ್ಪಿದ್ದು, ಇನ್ನೊಬ್ಬ ಗಾಯಗೊಂಡಿದ್ದಾನೆ ಎಂದು ಬಿಎಸ್‌ಎಫ್‌ ಮೂಲಗಳು ತಿಳಿಸಿವೆ.
ಕಾಶ್ಮೀರ(ಅ.28): ಕದನ ವಿರಾಮ ಉಲ್ಲಂಘಿಸಿ ಆರ್ಎಸ್ ಪುರ ಮತ್ತು ಅರ್ನಿಯಾ ವಲಯದಲ್ಲಿ ಪಾಕಿಸ್ತಾನದ ಪಡೆಗಳು ನಡೆಸಿದ ಗುಂಡಿನ ದಾಳಿಗೆ ಗಡಿ ಭದ್ರತಾ ಪಡೆಯ ಯೋಧ ಹುತಾತ್ಮರಾಗಿದ್ದಾರೆ.
ಗುಂಡಿನ ದಾಳಿಯಲ್ಲಿ ಆರು ನಾಗರಿಕರು ಗಾಯಗೊಂಡಿದ್ದಾರೆ. ಅರ್ನಿಯಾ ವಲಯದಲ್ಲಿ ಬಿಎಸ್ಎಫ್ ಯೋಧರು ನಡೆಸಿದ ಪ್ರತಿದಾಳಿಗೆ ಪಾಕಿಸ್ತಾನದ ಒಬ್ಬ ರೇಂಜರ್ ಸಾವನ್ನಪ್ಪಿದ್ದು, ಇನ್ನೊಬ್ಬ ಗಾಯಗೊಂಡಿದ್ದಾನೆ ಎಂದು ಬಿಎಸ್ಎಫ್ ಮೂಲಗಳು ತಿಳಿಸಿವೆ.
ತಂಗ್ಧಾರ ವಲಯದ ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಗಡಿ ನಿಯಂತ್ರಣಾ ರೇಖೆಯ ಬಳಿ ಒಳನುಸುಳುತ್ತಿದ್ದ ಪಾಕಿಸ್ತಾನ ಉಗ್ರರನ್ನು ತಡೆಯುವ ವೇಳೆ ಗುಂಡಿನ ಚಕಮಕಿ ನಡೆದಿದೆ. ‘ತಂಗ್ಧಾರ ವಲಯದಲ್ಲಿ ಒಳನುಸುಳುತ್ತಿದ್ದ ಉಗ್ರರನ್ನು ಸೈನಿಕರ ತಂಡ ತಡೆದು ಹಿಮ್ಮೆಟ್ಟಿಸಿದೆ.
