ವರಿಷ್ಠರು ಈಗಾಗಲೇ ನಿರ್ಧರಿಸಿದ್ದು, ಸಮ್ಮಿಶ್ರ ಸರ್ಕಾರ ಪತನಗೊಂಡಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪನವರೇ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ವಿ.ಸೋಮಣ್ಣ ಹೇಳಿದ್ದಾರೆ.

ಬಳ್ಳಾರಿ :  ಮಾಜಿ ಸಚಿವ ಬಿ.ಶ್ರಿರಾಮುಲು ಮುಂದೊಂದು ನ ದಿನ ಮುಖ್ಯಮಂತ್ರಿಯಾಗುವುದು ಖಚಿತ ಎಂದು ಬಿಜೆಪಿ ಹಿರಿಯ ಮುಖಂಡ ವಿ.ಸೋಮಣ್ಣ ಪುನರುಚ್ಚರಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ನಗರದಲ್ಲಿ ಶುಕ್ರವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, 37 ಸ್ಥಾನ ಪಡೆದ ಎಚ್‌.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಬಲ್ಲರಾದರೆ ಶ್ರೀರಾಮುಲು ಯಾಕಾಗಬಾರದು ಎಂದು ಅವರು ಪ್ರಶ್ನಿಸಿದರು. ಆದರೆ ವರಿಷ್ಠರು ಈಗಾಗಲೇ ನಿರ್ಧರಿಸಿದ್ದು, ಸಮ್ಮಿಶ್ರ ಸರ್ಕಾರ ಪತನಗೊಂಡಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪನವರೇ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ತನ್ನ ಮಾತನ್ನು ಸಮರ್ಥಿಸಿದರು.

ರಾಷ್ಟ್ರದಲ್ಲಿ ನರೇಂದ್ರ ಮೋದಿ, ರಾಜ್ಯದಲ್ಲಿ ಬಿ.ಎಸ್‌.ಯಡಿಯೂರಪ್ಪ ಹಾಗೂ ಬಳ್ಳಾರಿ ಜಿಲ್ಲೆಗೆ ಬಿ.ಶ್ರೀರಾಮುಲು ದೊಡ್ಡ ನಾಯಕರಾಗಿದ್ದಾರೆ. ಶ್ರೀರಾಮುಲು ಮುಂದೊಂದು ದಿನ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಸ್ಪಷ್ಟಪಡಿಸಿದ್ದೇನೆ. ಶೋಭಾ ಕರಂದ್ಲಾಜೆ ಅವರು ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿಕೊಂಡಿದ್ದಾರೆ. ಹೀಗಾಗಿ ಅವರ ಹೇಳಿಕೆಯ ಬಗ್ಗೆ ನನಗೆ ಬೇಜಾರಾಗಿಲ್ಲ ಎಂದರು.

ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾರೆ. 37 ಸ್ಥಾನ ಪಡೆದ ಕುಮಾರಸ್ವಾಮಿ ಅವರೂ ಮುಖ್ಯಮಂತ್ರಿಯಾಗಿದ್ದಾರೆ. ಶ್ರೀರಾಮುಲು ಯಾಕೆ ಆಗಬಾರದು ಎಂದರು.