ವಾಷಿಂಗ್ಟನ್(ಸೆ.20): ಅಮೆರಿಕ ರಾಜಧಾನಿ ವಾಷಿಂಗ್ಟನ್‌ನಲ್ಲಿ ಆಗುಂತಕರು ಗುಂಡಿನ ದಾಳಿ ನಡೆಸಿದ್ದು, ಘಟನೆಯಲ್ಲಿ ಓರ್ವ ಮೃತಪಟ್ಟು ಇತರ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ವಾಷಿಂಗ್ಟನ್ ಡಿಸಿಯ ಕೊಲಂಬಿಯಾ ರಸ್ತೆ ಬಳಿ ಮುಸುಕುಧಾರಿಗಳು ಮನಬಂದಂತೆ ಗುಂಡು ಹಾರಿಸಿದ್ದಾರೆ ಎಂದು ಸ್ಥಳೀಓಯ ಪೊಲೀಸರು ಮಾಹಿತಿ ನೀಡಿದ್ದಾರೆ.

ಏಕಾಏಕಿ ನಡೆದ ಗುಂಡಿನ ದಾಳಿಯಲ್ಲಿ ಆರು ಜನರಿಗೆ ಗುಂಡು ತಗುಲಿದ್ದು, ಕೂಡಲೇ ಗಾಯಾಳುಗಳನ್ನ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಮಾರ್ಗ ಮಧ್ಯೆಯೇ ಓರ್ವ ಮೃತಪಟ್ಟಿದ್ದಾಗಿ ಪೊಲೀಸರು ತಿಳಿಸಿದ್ದಾರೆ.

ಸದ್ಯ ಗುಂಡಿನ ದಾಳಿಗೆ ಕಾರಣ ತಿಳಿದು ಬಂದಿಲ್ಲವಾದರೂ, ಆಗುಂತಕರಿಗಾಗಿ ತೀವ್ರ ಶೋಧ ಮುಂದುವರೆದಿದೆ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.