ಉರುಳಿ ಬಿದ್ದ ಬಸ್ : ಓರ್ವ ಸಾವು, 35 ಮಂದಿಗೆ ಗಾಯ

https://static.asianetnews.com/images/authors/56bf5dcb-7868-50e0-b2d0-38391a34809d.jpg
First Published 26, Jul 2018, 12:44 PM IST
One killed 35 injured as bus overturns Mandya
Highlights

ಬಸ್ ಉರುಳಿ ಬಿದ್ದು ಓರ್ವ ಸಾವನ್ನಪ್ಪಿ 35 ಮಂದಿ ಗಾಯಗೊಂಡಿರುವ ಘಟನೆ ಮಂಡ್ಯದಲ್ಲಿ  ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿ  ಈ ಅವಘಡ ಸಂಭವಿಸಿದೆ.

ಮಂಡ್ಯ  : ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾಗಿ ಓರ್ವ ಸಾವನ್ನಪ್ಪಿದ್ದು, 35ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. 

ಮಂಡ್ಯದ ಬುಳ್ಳಿಕೆಂಪನದೊಡ್ಡಿ ಬಳಿಯ ಮೈಸೂರು-ಮಳವಳ್ಳಿ ಹೆದ್ದಾರಿಯಲ್ಲಿ ಈ ದುರ್ಘಟನೆ ಸಂಭವಿಸಿದೆ.  ಮೈಸೂರು ತಾಲೂಕಿನ ತಾಯೂರು ಗ್ರಾಮದಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಬುಳ್ಳಿಕೆಂಪನದೊಡ್ಡಿ ಬಳಿ ರಸ್ತೆ ದಾಟುತ್ತಿದ್ದ ವೇಳೆ ಶಾಲಾ ಬಾಲಕನಿಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ಬಸ್ ಉರುಳಿ ಬಿದ್ದಿದೆ. 

ಗಾಯಾಳುಗಳನ್ನು ಸ್ಥಳೀಯರ ಸಹಾಯದಿಂದ  ಆಸ್ಪತ್ರೆಗೆ ದಾಖಲು ಮಾಡಲಾಗಿದೆ.  ಇನ್ನು ಈ ಘಟನೆಯಲ್ಲಿ 9ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಮಂಡ್ಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಬಸ್ ನಲ್ಲಿ ಬಹುತೇಕ ಮಂದಿ ಗಾರ್ಮೆಂಟ್ಸ್ ಫ್ಯಾಕ್ಟರಿ ನೌಕರರು ಹಾಗೂ ಕೂಲಿ ಕಾರ್ಮಿಕರು ಇದ್ದರು ಎನ್ನಲಾಗಿದೆ. ಘಟನೆ ನಡೆದ ಸ್ಥಳಕ್ಕೆ ಟಿ.ನರಸಿಪುರ ಕ್ಷೇತ್ರದ ಶಾಸಕ ಅಶ್ವಿನ್ ಕುಮಾರ್, ಡಿವೈಎಸ್ಪಿ ಸಿ.ಮಲ್ಲಿಕ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

loader