ನಿಂತಿದ್ದ ಕಂಟೈನರ್'ಗೆ ಕೆಎಸ್'ಆರ್'ಟಿಸಿ ಬಸ್ ಡಿಕ್ಕಿಯಾಗಿ  ಬಸ್ ಚಾಲಕ ಮೃತಪಟ್ಟಿದ್ದು, ಐವರು ಪ್ರಯಾಣಿಕರು ಗಾಯಗೊಂಡಿದ್ದಾರೆ. ಚಿಕ್ಕಬಳ್ಳಾಪುರ ತಾಲೂಕಿನ ಆರೂರು ಗ್ರಾಮದ  ರಾಷ್ಟ್ರೀಯ ಹೆದ್ದಾರಿ 7ರಲ್ಲಿ ದುರ್ಘಟನೆ ಸಂಭವಿಸಿದೆ.

ಚಿಕ್ಕಬಳ್ಳಾಪುರ(ನ.30): ಚಿಕ್ಕಬಳ್ಳಾಪುರದಲ್ಲಿ ಬೆಳ್ಳಂಬೆಳಗ್ಗೆ ಜವರಾಯ ಅಟ್ಟಹಾಸ ಮೆರೆದಿದ್ದಾನೆ. ನಿಂತಿದ್ದ ಕಂಟೈನರ್'ಗೆ ಕೆಎಸ್'ಆರ್'ಟಿಸಿ ಬಸ್ ಡಿಕ್ಕಿಯಾಗಿ ಬಸ್ ಚಾಲಕ ಮೃತಪಟ್ಟಿದ್ದು, ಐವರು ಪ್ರಯಾಣಿಕರು ಗಾಯಗೊಂಡಿದ್ದಾರೆ. ಚಿಕ್ಕಬಳ್ಳಾಪುರ ತಾಲೂಕಿನ ಆರೂರು ಗ್ರಾಮದ ರಾಷ್ಟ್ರೀಯ ಹೆದ್ದಾರಿ 7ರಲ್ಲಿ ದುರ್ಘಟನೆ ಸಂಭವಿಸಿದೆ. ಸ್ಥಳದಲ್ಲಿ ದಟ್ಟವಾದ ಮಂಜು ಆವರಿಸಿದ್ದು, ಮುಂದೆ ನಿಂತಿದ್ದ ವಾಹನ ಕಾಣದೇ ಕಂಟೈನರ್'ಗೆ ಬಸ್ ಡಿಕ್ಕಿಯಾಗಿದೆ.

ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಕಲ್ಲಪ್ಪ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಸದ್ಯ ಗಾಯಾಳುಗಳನ್ನು ಚಿಕ್ಕಬಳ್ಳಾಪುರದ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಗುಡಿಬಂಡೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.