ಇದುವರೆಗೂ 24,348 ಮಂದಿ ಚುನಾವಣಾ ಆಯೋಗದ ಮತದಾರರ ಪಟ್ಟಿಯಲ್ಲಿ ನೋಂದಣಿ ಮಾಡಿಸಿಕೊಂಡಿದ್ದಾರೆ.
ನವದೆಹಲಿ(ಆ.13): ಸಾಗರೋತ್ತರ ರಾಷ್ಟ್ರಗಳಲ್ಲಿರುವ ಭಾರತೀಯರ ಪೈಕಿ 24 ಸಾವಿರ ಮಂದಿ ಮಾತ್ರ ಭಾರತದ ಮತದಾರರ ಪಟ್ಟಿಯಲ್ಲಿ ನೋಂದಣಿ ಮಾಡಿಕೊಂಡಿದ್ದಾರೆ.
ಸಾಗರೋತ್ತರ ರಾಷ್ಟ್ರಗಳಲ್ಲಿರುವ ಭಾರತೀಯರನ್ನು ಚುನಾವಣಾ ಪ್ರಕ್ರಿಯೆಯಲ್ಲಿ ತರುವ ಉದ್ದೇಶದಿಂದ ಭಾರತೀಯ ಚುನಾವಣಾ ಆಯೋಗ ಆನ್'ಲೈನ್ ಮೂಲಕ ನೋಂದಣಿ ಮಾಡಿಸಿಕೊಳ್ಳಲು ಜಾಲತಾಣವನ್ನು ಆರಂಭಿಸಿದೆ. ವಿದೇಶಗಳಲ್ಲಿರುವ ಎಷ್ಟು ಭಾರತೀಯರು ಮತದಾನ ಪ್ರಕ್ರಿಯೆಯಲ್ಲಿ ಸಕ್ರಿಯರಾಗಬಹುದು ಎಂಬುದರ ಕುರಿತು ಸ್ಪಷ್ಟತೆಯಿಲ್ಲ. ಆದರೆ, ಇದುವರೆಗೂ 24,348 ಮಂದಿ ಚುನಾವಣಾ ಆಯೋಗದ ಮತದಾರರ ಪಟ್ಟಿಯಲ್ಲಿ ನೋಂದಣಿ ಮಾಡಿಸಿಕೊಂಡಿದ್ದಾರೆ.
ಇದರ ಪ್ರಕಾರ ಕೇರಳ ಮೂಲದವರು 23,556 ಮಂದಿ ನೋಂದಣಿ ಮಾಡಿಸಿಕೊಂಡಿದ್ದು, ಪಂಜಾಬ್‌ನಿಂದ 364, ಗುಜರಾತ್'ನಿಂದ 14 ಮಂದಿ ಮಾತ್ರ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಂಡಿದ್ದಾರೆ. ಈ ಮೂಲಕ ವಿದೇಶದಲ್ಲಿರುವ ಭಾರತೀಯರ ಪೈಕಿ ಅತಿಹೆಚ್ಚು ಕೇರಳ ಮೂಲದವರು ಮತದಾರರ ಪಟ್ಟಿ ವ್ಯಾಪ್ತಿಗೆ ಬಂದಂತಾಗಿದೆ.
