ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ವಿವಾದಾತ್ಮಕ ಹೇಳಿಕೆ ಸಂಸತ್ ಉಭಯ ಸದನಗಳಲ್ಲಿ ಇಂದು ಪ್ರತಿಧ್ವನಿಸಿತು. ಪ್ರತಿಪಕ್ಷಗಳು ಅವರ ರಾಜಿನಾಮೆಗೆ ಒತ್ತಾಯಿಸಿದೆ.

ನವದೆಹಲಿ (ಡಿ.27): ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ವಿವಾದಾತ್ಮಕ ಹೇಳಿಕೆ ಸಂಸತ್ ಉಭಯ ಸದನಗಳಲ್ಲಿ ಇಂದು ಪ್ರತಿಧ್ವನಿಸಿತು. ಪ್ರತಿಪಕ್ಷಗಳು ಅವರ ರಾಜಿನಾಮೆಗೆ ಒತ್ತಾಯಿಸಿದೆ.

ರಾಜ್ಯಸಭಾ ಪ್ರತಿಪಕ್ಷ ನಾಯಕ ಗುಲಾಂ ನಬಿ ಆಜಾದ್, ಸಂವಿಧಾನದಲ್ಲಿ ಯಾವ ವ್ಯಕ್ತಿಗೆ ನಂಬಿಕೆ ಇರುವುದಿಲ್ಲವೋ ಅವರಿಗೆ ಸಂಸತ್ ಸದಸ್ಯನಾಗಿರುವುದಕ್ಕೂ ಹಕ್ಕಿರುವುದಿಲ್ಲ ಎಂದು ಹೇಳಿದ್ದಾರೆ. ಅನಂತ್ ಕುಮಾರ್ ಹೆಗ್ಡೆ ಹೇಳಿಕೆಯನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ವಿಜಯ್ ಗೋಯಲ್ ಹೇಳಿದ್ದಾರೆ.

ಅಂಬೇಡ್ಕರ್'ಗೆ ಅವಮಾನ ಮಾಡಿರುವುದನ್ನು ನಾವು ಸಹಿಸುವುದಿಲ್ಲ. ಅನಂತ್ ಕುಮಾರ್ ಹೆಗಡೆ ರಾಜಿನಾಮೆ ನೀಡಲೇಬೇಕು ಎಂದು ಪ್ರತಿಪಕ್ಷಗಳು ಒತ್ತಾಯಿಸಿವೆ.

ನಾವು ಸಂವಿಧಾನವನ್ನು ಬದಲಾಯಿಸುತ್ತೇವೆ. ಜಾತ್ಯಾತೀತತೆ ಅನ್ನೋದು ಫ್ಯಾಷನ್ ಆಗಿದೆ ಎಂದು ಅನಂತ್ ಕುಮಾರ್ ಹೆಗಡೆ ಹೇಳಿದ್ದರು. ಇವರ ಈ ಹೇಳಿಕೆ ವಿವಾದವನ್ನು ಹುಟ್ಟು ಹಾಕಿದೆ.