ನವದೆಹಲಿ(ಸೆ.17): ಪ್ರಧಾನಿ ನರೇಂದ್ರ ಮೋದಿ ಇಂದು 69ನೇ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದು, ವಿಪಕ್ಷ ನಾಯಕರು ಪ್ರಧಾನಿ ಮೋದಿಗೆ ಜನ್ಮದಿನದ ಶುಭಾಶಯ ಕೋರಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಪ್ರಧಾನಿ ಅವರಿಗೆ ಜನ್ಮ ದಿನದ ಶುಭ ಕೋರಿದ್ದು, ಮೋದಿ ಆರೋಗ್ಯವಂತರಾಗಿ ಸಂತೋಷದಿಂದ ದೀರ್ಘಕಾಲ ಬಾಳಲಿ ಎಂದು ಹಾರೈಸಿದ್ದಾರೆ.

ಅದರಂತೆ ಪ.ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕೂಡ ಪ್ರಧಾನಿ ಅವರಿಗೆ ಜನ್ಮ ದಿನದ ಶುಭ ಕೋರಿದ್ದು, 69ನೇ ವಸಂತಕ್ಕೆ ಕಾಲಿಟ್ಟ ಪ್ರಧಾನಿ ಮೋದಿಗೆ ಜನ್ಮ ದಿನದ ಶುಭಾಶಯ ಎಂದು ಹೇಳಿದ್ದಾರೆ.

ಇನ್ನು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್‌.ಡಿ. ದೇವೇಗೌಡ ಕೂಡ ಪ್ರಧಾನಿ ಮೋದಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದು, ಪ್ರಧಾನಿ ಅವರಿಗೆ ದೇವರು ದೀರ್ಘ ಆಯುಷ್ಯ ಹಾಗೂ ಆರೋಗ್ಯ ನೀಡಲಿ ಎಂದು ಹಾರೈಸಿದ್ದಾರೆ.

BSP ಮುಖ್ಯಸ್ಥೆ ಮಾಯಾವತಿ ಕೂಡ ಪ್ರಧಾನಿ ಮೋದಿ ಅವರಿಗೆ ಜನ್ಮ ದಿನದ ಶುಭ ಸಂದೇಶ ಕಳುಹಿಸಿದ್ದು, ಮೋದಿ ದೀರ್ಘಾಯುವಾಗಲಿ ಎಂದು ಟ್ವೀಟ್ ಮಾಡಿದ್ದಾರೆ.