ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆ ಬಹಿಷ್ಕರಿಸಲು ಪ್ಲಾನ್ ಮಾಡಲಾಗುತ್ತಿದೆ.
ಬೆಂಗಳೂರು (ಡಿ.05): ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆ ಬಹಿಷ್ಕರಿಸಲು ಪ್ಲಾನ್ ಮಾಡಲಾಗುತ್ತಿದೆ.
ಇವಿಎಂ ವಿಚಾರದಲ್ಲಿ ಬಿಜೆಪಿ ವಿರುದ್ಧ ಮುಗಿ ಬಿದ್ದಿರುವ ವಿಪಕ್ಷಗಳು ಕಾಂಗ್ರೆಸ್ ಪಕ್ಷವನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲು ಪ್ರಯತ್ನಿಸುತ್ತಿದೆ. ಎಎಪಿ, ಎಸ್ಪಿ, ಬಿಎಸ್ಪಿ, ಟಿಎಂಸಿ, ಆರ್ಜೆಡಿ ತಂತ್ರಗಾರಿಕೆ ನಡೆಸುತ್ತಿದೆ. ಆದರೆ ವಿಪಕ್ಷಗಳ ಒತ್ತಡಕ್ಕೆ ಕಾಂಗ್ರೆಸ್ ಪಕ್ಷ ಸೊಪ್ಪು ಹಾಕುತ್ತಿಲ್ಲ. ಇವಿಎಂನಲ್ಲಿ ಬಿಜೆಪಿ ಪರವಾಗಿಯೇ ಮತ ಬೀಳುತ್ತಿದೆ ಎಂದು ಆರೋಪಿಸಿರುವ ವಿಪಕ್ಷಗಳು ಕಾಂಗ್ರೆಸ್ ಪಕ್ಷವನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಒಗ್ಗಟ್ಟಿನ ಹೋರಾಟಕ್ಕೆ ತಂತ್ರ ರೂಪಿಸುತ್ತಿವೆ.
ಎಎಪಿ, ಎಸ್ಪಿ, ಬಿಎಸ್ಪಿ ಬೇಡಿಕೆಗೆ ಕಾಂಗ್ರೆಸ್ ಪ್ರತಿಕ್ರಿಯಿಸದೇ ಚುನಾವಣೆ ಬಹಿಷ್ಕರಿಸುವ ವಿಚಾರದಲ್ಲಿ ಮೌನ ವಹಿಸಿದೆ. ಮುಂದಿನ ವರ್ಷ ಮೇ ವೇಳೆಗೆ ಕರ್ನಾಟಕ ವಿಧಾನಸಭಾ ಚುನಾವಣೆ ನಡೆಯಲಿದೆ.
