ಬೆಂಗಳೂರು(ಸೆ.21): ರಾಜ್ಯ ಸರ್ಕಾರ ಕಾವೇರಿ ನೀರು ಹಂಚಿಕೆ ವಿಷಯದಲ್ಲಿ ಸುಪ್ರೀಂ ಕೋರ್ಟ್ ತೀರ್ಪಿನ ವಿರುದ್ಧ ದಿಟ್ಟ ನಿರ್ಧಾರ ಕೈಗೊಂಡಿರುವುದಕ್ಕೆ ವಿರೋಧ ಪಕ್ಷಗಳಾದ ಜೆಡಿಎಸ್ ಹಾಗೂ ಬಿಜೆಪಿ ಸ್ವಾಗತಿಸಿವೆ.

'ರಾಜ್ಯ ಸರ್ಕಾರದ ನಿರ್ಧಾರವನ್ನು ಸ್ವಾಗತಿಸುತ್ತೇನೆ. ವಿಧಾನಮಂಡಲದಲ್ಲಿ ಸಿಎಂ ನಿರ್ಧಾರವನ್ನು ಬೆಂಬಲಿಸುತ್ತೇವೆ.

ರಾಜ್ಯ ಸರ್ಕಾರದ ನಡೆಗೆ ನಮ್ಮ ಅಸಮಾಧಾನವಿದೆ. ಕೇಂದ್ರಕ್ಕೂ ಕಾವೇರಿಗೂ ಯಾವುದೇ ಸಂಬಂಧವಿಲ್ಲ. ವಿಧಾನಮಂಡಲ ಅಧಿವೇಶನದಲ್ಲಿ ಚರ್ಚಿಸುತ್ತೇವೆ. ಕಾವೇರಿ ವಿಷಯದಲ್ಲಿ ಪ್ರಧಾನಿ ಮಧ್ಯಪ್ರವೇಶ ಸಾಧ್ಯವಿಲ್ಲ. ಮೋದಿ ಸೇರಿದಂತೆ ಇತರ ನಾಯಕರನ್ನು ಸಂಪರ್ಕಿಸಿದ್ದೇವೆ' ಎಂದು ಸುವರ್ಣನ್ಯೂಸ್​ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್​ವೈ ತಿಳಿಸಿದ್ದಾರೆ.

ಸರ್ವಪಕ್ಷ ಸಭೆಗೆ ಗೈರು ಹಾಜರಾದ ಬಗ್ಗೆ ಮಾತನಾಡಿದ ಅವರು, ಈ ಸಭೆಯಲ್ಲಿ ನಮಗೆ ನಂಬಿಕೆ ಇಲ್ಲ. ನಮ್ಮ ಸಲಹೆಗಳನ್ನು ಅವರು ಸ್ವೀಕರಿಸುವುದಿಲ್ಲ. ಹಾಗಾಗಿ ಇಂದು ನಡೆದ ಸರ್ವಪಕ್ಷ ಸಭೆಗೆ ಹಾಜರಾಗಿಲ್ಲ' ಎಂದು ಹೇಳಿದರು.

ಇನ್ನೊಂದು ವಿಪಕ್ಷವಾದ ಜೆಡಿಎಸ್ ಸಹ ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿ ಸರ್ಕಾರದ ಜೊತೆಯಿರುವುದಾಗಿ ಹೇಳಿದೆ.