ಕಾಂಗ್ರೆಸ್ ಹಾಗೂ ಇತರೆ 7 ಪ್ರತಿಪಕ್ಷಗಳು ಪಶ್ಚಿಮ ಬಂಗಾಳದ ಮಾಜಿ ರಾಜ್ಯಪಾಲ ಹಾಗೂ ಮಹಾತ್ಮ ಗಾಂಧಿ ಮೊಮ್ಮಗ ಗೋಪಾಲ ಕೃಷ್ಣ ಗಾಂಧಿಯವರನ್ನು ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಆಯ್ಕೆ ಮಾಡಿವೆ.
ನವದೆಹಲಿ (ಜು.11): ಕಾಂಗ್ರೆಸ್ ಹಾಗೂ ಇತರೆ 7 ಪ್ರತಿಪಕ್ಷಗಳು ಪಶ್ಚಿಮ ಬಂಗಾಳದ ಮಾಜಿ ರಾಜ್ಯಪಾಲ ಹಾಗೂ ಮಹಾತ್ಮ ಗಾಂಧಿ ಮೊಮ್ಮಗ ಗೋಪಾಲ ಕೃಷ್ಣ ಗಾಂಧಿಯವರನ್ನು ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಆಯ್ಕೆ ಮಾಡಿವೆ.
ಇಂದು ನಡೆದ ಪ್ರತಿಪಕ್ಷಗಳ ಸಂಸದೀಯ ಸಭೆಯಲ್ಲಿ ಗೋಪಾಲಕೃಷ್ಣ ಗಾಂಧಿಯವರ ಹೆಸರು ಮಾತ್ರ ಚರ್ಚೆಯಾಗಿದೆ ಎಂದು ವರದಿಯಾಗಿದೆ. ಪ್ರತಿಪಕ್ಷಗಳ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಸ್ಪರ್ಧಿಸಲು ಅವರು ಕೂಡಾ ಒಪ್ಪಿಕೊಂಡಿದ್ದಾರೆ ಎಂದು ಸಭೆಯ ಅಧ್ಯಕ್ಷತೆ ವಹಿಸಿದ್ದ ಸೋನಿಯಾ ಗಾಂಧಿ ಹೇಳಿದ್ದಾರೆ.
ರಾಷ್ಟ್ರಪತಿ ಅಭ್ಯರ್ಥಿಯಾಗಿಯೂ ಗೋಪಾಲಕೃಷ್ಣ ಗಾಂಧಿಯವರನ್ನು ಆಯ್ಕೆ ಮಾಡಲಾಗಿತ್ತು. ಆದರೆ ಪ್ರತಿಪಕ್ಷಗಳು ಇವರಿಗೆ ಬೆಂಬಲ ವ್ಯಕ್ತಪಡಿಸಿರಲಿಲ್ಲ. ಮಾಜಿ ಲೋಕಸಭಾ ಸ್ಪೀಕರ್ ಮೀರಾ ಕುಮಾರ್’ಗೆ ಬೆಂಬಲ ವ್ಯಕ್ತಪಡಿಸಿದ್ದರು.
