ಕೇಂದ್ರ ಸರ್ಕಾರದ 2001ರ ಸೆಂಟ್ರಲ್ ಮೋಟರ್ ವೆಹಿಕಲ್ ಆ್ಯಕ್ಟ್ ಅನ್ವಯ ಹೈ ಸೆಕ್ಯೂರಿಟಿ ರಿಜಿಸ್ಟ್ರೇಶನ್ ಪ್ಲೇಟ್ (ಎಚ್‌ಎಸ್‌ಆರ್‌ಪಿ) ಅಳವಡಿಸಬೇಕೆಂಬ ನಿಯಮವನ್ನು ರಾಜ್ಯದಲ್ಲಿ ಶೀಘ್ರ ಜಾರಿಗೊಳಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.

ಬೆಂಗಳೂರು: ಕೇಂದ್ರ ಸರ್ಕಾರದ 2001ರ ಸೆಂಟ್ರಲ್ ಮೋಟರ್ ವೆಹಿಕಲ್ ಆ್ಯಕ್ಟ್ ಅನ್ವಯ ಹೈ ಸೆಕ್ಯೂರಿಟಿ ರಿಜಿಸ್ಟ್ರೇಶನ್ ಪ್ಲೇಟ್ (ಎಚ್‌ಎಸ್‌ಆರ್‌ಪಿ) ಅಳವಡಿಸಬೇಕೆಂಬ ನಿಯಮವನ್ನು ರಾಜ್ಯದಲ್ಲಿ ಶೀಘ್ರ ಜಾರಿಗೊಳಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.

ಈ ಸಂಬಂಧ ಅಧಿಕಾರಿಗಳ ಸಭೆ ನಡೆಸಿದ ಸಾರಿಗೆ ಸಚಿವ ಎಚ್.ಎಂ. ರೇವಣ್ಣ, ವಾಹನಗಳ ಮೇಲೆ ಸೂಕ್ತ ನಿಗಾ ಇಡಲು ಹೊಸ ನಂಬರ್ ಪ್ಲೇಟ್ ಅಳವಡಿಕೆಗೆ ಸೂಕ್ತ ಕ್ರಮಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ಹೀಗಾಗಿ ಒಂದು ವಾರದೊಳಗೆ ಎಲ್ಲ ಬಗೆಯ ವಾಹನಗಳಿಗೆ ಹೊಸ ನಂಬರ್ ಪ್ಲೇಟ್ ಅಳವಡಿಸುವ ಕುರಿತಂತೆ ಆದೇಶ ಹೊರಬೀಳುವ ನಿರೀಕ್ಷೆ ಇದೆ.

2009ರಲ್ಲೇ ಈ ಕಾಯ್ದೆ ಜಾರಿಗೆ ಬಂದಿದ್ದರೂ ರಾಜ್ಯದಲ್ಲಿ ಈ ನಿಯಮವನ್ನು ಗಂಭೀರವಾಗಿ ಅನುಷ್ಠಾನಗೊಳಿಸಿರಲಿಲ್ಲ. ಹೊಸ ನಂಬರ್ ಪ್ಲೇಟ್ ದುಬಾರಿಯಾಗಿದ್ದು, ಸಾರ್ವಜನಿಕರಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು.