ಕಂಬಳ ಕ್ರೀಡೆ ಕುರಿತು ರಾಜ್ಯ ಸರ್ಕಾರದ ಸುಗ್ರೀವಾಜ್ಞೆ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ರಾಜ್ಯ ಸರಕಾರ ಹೊರಡಿಸಿದ್ದ ಸುಗ್ರೀವಾಜ್ಞೆ ಸಿಂಧುತ್ವದ ಬಗ್ಗೆ ಅನುಮಾನ ವ್ಯಕ್ತಪಡಿಸಿದೆ.  

ನವದೆಹಲಿ (ನ.17): ಕಂಬಳ ಕ್ರೀಡೆ ಕುರಿತು ರಾಜ್ಯ ಸರ್ಕಾರದ ಸುಗ್ರೀವಾಜ್ಞೆ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ರಾಜ್ಯ ಸರಕಾರ ಹೊರಡಿಸಿದ್ದ ಸುಗ್ರೀವಾಜ್ಞೆ ಸಿಂಧುತ್ವದ ಬಗ್ಗೆ ಅನುಮಾನ ವ್ಯಕ್ತಪಡಿಸಿದೆ. ಕಂಬಳ ವಿಚಾರದಲ್ಲಿ ರಾಜ್ಯ ಸರ್ಕಾರ ಇಕ್ಕಟ್ಟಿಗೆ ಸಿಲುಕಿದೆ. ಕೇಂದ್ರ ಸರ್ಕಾರದಿಂದ ಈ ಕುರಿತಾಗಿ ಸುಪ್ರೀಂಕೋರ್ಟ್ ಸ್ಪಷ್ಟನೆ ಕೇಳಿದೆ.

ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರ ನೇತೃತ್ವದ ಸುಪ್ರೀಂಕೋರ್ಟ್ ತ್ರಿಸದಸ್ಯ ಪೀಠ ಇಂದು ಕಂಬಳ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ಸರ್ಕಾರದ ಪರವಾಗಿ ಅಟಾರ್ನಿ ಜನರಲ್ ಕೆ.ಕೆ.ವೇಣುಗೋಪಾಲ್ ಉಪಸ್ಥಿತರಿದ್ದರು.

ಕಂಬಳ ಕುರಿತು ರಾಜ್ಯ ಸರ್ಕಾರ ಮೊದಲು ರಾಷ್ಟ್ರಪತಿಗೆ ವಿಧೇಯಕವನ್ನು ಕಳುಹಿಸಿತ್ತು. ಆದರೆ ಕಂಬಳ ಕ್ರೀಡೆ ಕುರಿತು ಸರ್ಕಾರದ ವಿಧೇಯಕಕ್ಕೆ ರಾಷ್ಟ್ರಪತಿ ಒಪ್ಪಿಗೆ ನೀಡಿರಲಿಲ್ಲ. ವಿಧೇಯಕ ಮರುಪರಿಶೀಲನೆಗೆ ಕಳುಹಿಸಿದ್ದರು. ಆದರೆ ವಿಧೇಯಕ ಮರುಪರಿಶೀಲನೆ ಮಾಡದೇ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿತ್ತು. ಕೊನೆಗೆ ರಾಜ್ಯ ಸರ್ಕಾರ ಕಳುಹಿಸಿದ್ದ ಸುಗ್ರೀವಾಜ್ಞೆಗೆ ರಾಷ್ಟ್ರಪತಿ ಸಮ್ಮತಿಸಿದ್ದರು. ಈ ಎಲ್ಲಾ ಬೆಳವಣಿಗೆ ಹಿನ್ನೆಲೆಯಲ್ಲಿ ಸುಗ್ರೀವಾಜ್ಞೆ ಬಗ್ಗೆ ಸುಪ್ರೀಂಕೋರ್ಟ್ ಸಂಶಯ ವ್ಯಕ್ತಪಡಿಸಿದೆ. ಈ ಕುರಿತು ಕೇಂದ್ರ ಸರ್ಕಾರದ ಸ್ಪಷ್ಟನೆಯನ್ನೂಈ ಕೇಳಿದೆ.

ಮುಂದಿನ ವಿಚಾರಣೆಯನ್ನು ಸುಪ್ರೀಂಕೋರ್ಟ್ ಸೋಮವಾರಕ್ಕೆ ಮುಂದೂಡಿದೆ.