ಇನ್ನೇನು ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದು ವಿವಿಧ ಪಕ್ಷಗಳು ಚುನಾವಣಾ ಸಿದ್ಧತೆಯಲ್ಲಿ ತೊಡಗಿವೆ. ಇದೇ ವೇಳೆ ಓವೈಸಿ ಹಾಗೂ ಪ್ರಕಾಶ್ ಅಂಬೇಡ್ಕರ್ ಬಿಜೆಪಿಯೊಂದಿಗೆ ಕೈ ಜೋಡಿಸಲಿದ್ದಾರೆ ಎಂದು ಶಿವಸೇನೆ ಹೇಳಿದೆ. 

ಮುಂಬೈ :  ಇನ್ನೇನು ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದು, ಇದೇ ವೇಳೆ ಚುನಾವಣೆಗಾಗಿ ವಿವಿಧ ಪಕ್ಷಗಳು ಸಕಲ ರೀತಿಯ ಸಿದ್ಧತೆಯಲ್ಲಿ ತೊಡಗಿವೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇದೇ ಸಂದರ್ಭದಲ್ಲಿ ಶಿವ ಸೇನೆಯ ಮುಖವಾಣಿ ಸಾಮ್ನಾದಲ್ಲಿ ಬಿಜೆಪಿಯೊಂದಿಗೆ ಮಹಾರಾಷ್ಟ್ರದಲ್ಲಿ ಎಐಎಂಐಎಂ ಮುಖ್ಯಸ್ಥ ಅಸಾದುದ್ದಿನ್ ಓವೈಸಿ ಹಾಗೀ ಭಾರತೀಯ ಬಹುಜನ ಮಹಾ ಸಂಘದ ಮುಖ್ಯಸ್ಥ ಪ್ರಕಾಶ್ ಅಂಬೇಡ್ಕರ್ ಒಕ್ಕೂಟ ರಚನೆ ಮಾಡಲು ಬಿಜೆಪಿಗೆ ಸಹಾಯ ಮಾಡುತ್ತಿದ್ದಾರೆ ಎಂದು ಆರೋಪಿಸಿದೆ. 

ಈಗಾಗಲೇ ಈ ಇಬ್ಬರೂ ಕೂಡ ಬಿಜೆಪಿಯೊಂದಿಗೆ ಕೈ ಜೋಡಿಸುವುದಾಗಿ ಘೋಷಣೆ ಮಾಡಿದ್ದಾರೆ ಎಂದು ಸಾಮ್ನಾದ ಸಂಪಾದಕೀಯದಲ್ಲಿ ಹೇಳಲಾಗಿದೆ. 

ಈ ಹಿಂದೆ ಬಿಜೆಪಿಗೆ ಬೆನ್ನ ಹಿಂದೆ ಬೆಂಬಲ ನೀಡಿದ್ದರು. ಆದರೆ ಈಗ ಬಹಿರಂಗವಾಗಿಯೇ ಬೆಂಬಲ ನೀಡುವುದಾಗಿ ಹೇಳಿದ್ದಾರೆ. ಬಿಜೆಪಿಯೊಂದಿಗೆ ಕೈ ಜೋಡಿಸುವ ಮೂಲಕ 2019ರ ಚುನಾವಣೆಯಲ್ಲಿ ತಮ್ಮ ಸಾಮರ್ಥ್ಯವನ್ನು ತೋರಿಸಲು ಸಜ್ಜಾಗಿದ್ದಾರೆ ಎಂದು ಹೇಳಲಾಗಿದೆ.