ಲೋಕಸಭಾ ಚುನಾವಣೆ : ಮೋದಿ, ಶಾ ಸ್ಪರ್ಧೆ ಎಲ್ಲಿಂದ..?

Owaisi challenges PM Modi, Amit Shah to contest from Hyderabad
Highlights

ಇನ್ನೇನು ಲೋಕಸಭಾ ಚುನಾವಣೆ ಸಮೀಪಿಸುತ್ತಿದೆ. ವಿವಿಧ ರಾಜಕೀಯ ಪಕ್ಷಗಳು ಚುನಾವಣೆಯ ತಯಾರಿಯಲ್ಲಿ ತೊಡಗಿವೆ. ಡಿಸೆಂಬರ್ ವೇಳೆಯೇ ಚುನಾವಣೆ ನಡೆಯುವ ಸಾಧ್ಯತೆ ಇದ್ದು, ಈ ಸಂದರ್ಭದಲ್ಲಿ ಎಐಎಂಐಎಂ ಮುಖಂಡ ಅಸಾದುದ್ದಿನ್ ಓವೈಸಿ ಪ್ರಧಾನಿ ಮೋದಿ ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರಿಗೆ ಸವಾಲು ಹಾಕಿದ್ದಾರೆ. 

ಹೈದ್ರಾಬಾದ್ :  ಎಐಎಂಐಎಂ ಮುಖಂಡ ಅಸಾದುದ್ದಿನ್ ಓವೈಸಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರಿಗೆ  ಸವಾಲು ಹಾಕಿದ್ದಾರೆ. ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ಬಂದು ಹೈದ್ರಾಬಾದ್ ನಲ್ಲಿ ಸ್ಪರ್ಧೆ ಮಾಡಲಿ ಎಂದು ಹೇಳಿದ್ದಾರೆ. 

ಅಲ್ಲದೇ ಕಾಂಗ್ರೆಸ್ ಗೂ ಕೂಡ ಈ ವೇಳೆ ಅವರು ಸವಾಲು ಹಾಕಿದ್ದು, ಈ 2 ವಿರೋಧ ಪಕ್ಷಗಳು ಒಟ್ಟಾಗಿ ಇಲ್ಲಿ ಸ್ಪರ್ಧೆ ಮಾಡಿದರೂ ಕೂಡ ಇಲ್ಲಿ ನಮ್ಮ ಪಕ್ಷವನ್ನು ಸೋಲಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. 

ಇನ್ನೇನು ಲೋಕಸಭಾ ಚುನಾವಣೆಯೂ ಹತ್ತಿರ ಬರುತ್ತಿದ್ದು, ನಮ್ಮ ಜನರು ಬಿಜೆಪಿಗೆ ಪಾಠ ಕಲಿಸಲು ಸಿದ್ಧರಾಗಿದ್ದಾರೆ. ಅಲ್ಲದೇ ಕಳೆದ ನಾಲ್ಕು ವರ್ಷದಲ್ಲಿ ಬಿಜೆಪಿ ಆಡಳಿತ ನೋಡಿದ್ದು, ಜನರ ಅಭಿವೃದ್ಧಿಗೆ ಕೆಲಸ ಮಾಡಿಲ್ಲ. ಆದ್ದರಿಂದ ಮುಂದಿನ ಚುನಾವಣೆಯಲ್ಲಿ ಜನರು ತಕ್ಕ ಪಾಠ ಕಲಿಸಲು ಸಿದ್ಧರಾಗಿದ್ದಾರೆ ಎಂದು ಹೇಳಿದ್ದಾರೆ. 

ಹೈದ್ರಾಬಾದ್ ನಲ್ಲಿ ನಡೆದ ತಮ್ಮ ಪಕ್ಷದ 60ನೇ ವರ್ಷದ ವಾರ್ಷಿಕೋತ್ಸವ ಸಮಾರಂಭದಲ್ಲಿ ಓವೈಸಿ ಈ ಹೇಳಿಕೆ ನೀಡಿದ್ದಾರೆ. 

loader