ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಹೈದರಾಬಾದ್ ಮೂಲದ ಆಲ್ ಇಂಡಿಯಾ ಮಜ್ಲಿಸ್-ಇ-ಇತ್ತೆಹಾದ್ ಮುಸ್ಲಿಮೀನ್ (ಎಐಎಂಐಎಂ) ಪಕ್ಷ ಕೂಡ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ
ಹೈದರಾಬಾದ್: ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಹೈದರಾಬಾದ್ ಮೂಲದ ಆಲ್ ಇಂಡಿಯಾ ಮಜ್ಲಿಸ್-ಇ-ಇತ್ತೆಹಾದ್ ಮುಸ್ಲಿಮೀನ್ (ಎಐಎಂಐಎಂ) ಪಕ್ಷ ಕೂಡ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ.
ಎಐಎಂಐಎಂ ಕೇಂದ್ರ ಕಚೇರಿಯಿಂದ ಬಿಡುಗಡೆಗೊಂಡ ಪಕ್ಷದ ಅಧ್ಯಕ್ಷ ಅಸಾದುದ್ದೀನ್ ಓವೈಸಿಯವರ ಹೇಳಿಕೆಯಲ್ಲಿ ಈ ವಿಷಯ ತಿಳಿಸಲಾಗಿದೆ.
ಪಕ್ಷದ ಕರ್ನಾಟಕ ಘಟಕದೊಂದಿಗೆ ಚರ್ಚಿಸಿದ ಬಳಿಕ ಈ ನಿರ್ಧಾರಕ್ಕೆ ಬರಲಾಗಿದೆ.
