ಕಾಂಗ್ರೆಸ್ ತೊರೆದು ಬಿಜೆಪಿಗೆ ಬರುವಂತೆ ಬಿಜೆಪಿ ಶಾಸಕ ಸಿ.ಟಿ. ರವಿ ಅವರು ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್‌ಗೆ ಆಹ್ವಾನ ನೀಡಿದ್ದಾರೆ.
ತುಮಕೂರು: ಕಾಂಗ್ರೆಸ್ ತೊರೆದು ಬಿಜೆಪಿಗೆ ಬರುವಂತೆ ಬಿಜೆಪಿ ಶಾಸಕ ಸಿ.ಟಿ. ರವಿ ಅವರು ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್ಗೆ ಆಹ್ವಾನ ನೀಡಿದ್ದಾರೆ.
ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಎಷ್ಟು ಬೇಗ ಪರಮೇಶ್ವರ್ ಕಾಂಗ್ರೆಸ್ ಬಿಡುತ್ತಾರೋ ಅಷ್ಟು ಬೇಗ ಅವರ ಭವಿಷ್ಯ ಉಜ್ವಲವಾಗಲಿದೆ. ಎಂದು ಹೇಳಿದ್ದಾರೆ.
ಕಳೆದ ಬಾರಿ ಕೊರಟಗೆರೆಯಲ್ಲಿ ಸೋಲಿಸಿದಂತೆ ಈ ಬಾರಿಯೂ ಪರಮೇಶ್ವರ್ ಅವರನ್ನು ಕಾಂಗ್ರೆಸ್ ಪಕ್ಷದವರೇ ಸೋಲಿಸಲಿದ್ದಾರೆ. ಪರಮೇಶ್ವರ್ ಅವರನ್ನು ಕಾಂಗ್ರೆಸ್ ಮೂಲೆಗುಂಪು ಮಾಡಲಿದ್ದು, ಅವರು ಬಿಜೆಪಿಗೆ ಬಂದರೆ ಉತ್ತಮ ಸ್ಥಾನ ಸಿಗಲಿದೆ’ ಎಂದರು.
