. ಮುಂಗಾರು ಅಧಿವೇಶನದ ಒಳಗಾಗಿಯೇ ಹೊಸ ಕಾಯ್ದೆ ಜಾರಿಗೆ ತರಬೇಕೆಂಬ ಉದ್ದೇಶದಿಂದ ಸುಗ್ರಿವಾಜ್ಞೆ ತರಲು ಚಿಂತನೆ ನಡೆದಿದೆ ಎಂದು ಸಚಿವ ಎಚ್.ಕೆ.ಪಾಟೀಲ್ ಹೇಳಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಕೊಳವೆ ಬಾವಿ ದುರಂತ ತಡೆವ ನಿಟ್ಟಿನಲ್ಲಿ ಕೊಳವೆ ಬಾವಿ ಕೊರೆವ ಸಂಸ್ಥೆಗಳು, ಕೊಳವೆ ಬಾವಿ ಕೊರೆ ಸುವ ಮಾಲೀಕರನ್ನು ಹೊಣೆಗಾರರನ್ನಾಗಿ ಸಲು ಸುಗ್ರೀವಾಜ್ಞೆ ಜಾರಿಗೆ ತರಲು ಸರ್ಕಾರ ನಿರ್ಧರಿಸಿದೆ ಎಂದು ಗ್ರಾಮೀಣಾ ಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಎಚ್‌.ಕೆ.ಪಾಟೀಲ್‌ ತಿಳಿಸಿದರು.

ಗುರುವಾರ ಸುದ್ದಿಗಾರರೊಂದಿಗೆ ಮಾತ ನಾಡಿದ ಅವರು, ಕೊಳವೆ ಬಾವಿ ಕೊರೆದ ಬಳಿಕ ಅಂತರ್ಜಲ ಸಿಗದೇ ವಿಫಲವಾದರೆ ಅಂತಹ ಕೊಳವೆ ಬಾವಿಗಳನ್ನು ಮುಚ್ಚಲು ಕಾನೂನಾತ್ಮಕ ಹೊಣೆಗಾರಿಕೆಯನ್ನು ಸಂಬಂಧಪಟ್ಟಸಂಸ್ಥೆ ಮತ್ತು ವ್ಯಕ್ತಿಗಳಿಗೆ ಹೊರಿಸುವುದು ಹೊಸ ಕಾಯ್ದೆಯ ಉದ್ದೇಶವಾಗಿದೆ. ಮುಂಗಾರು ಅಧಿವೇಶನದ ಒಳಗಾಗಿಯೇ ಹೊಸ ಕಾಯ್ದೆ ಜಾರಿಗೆ ತರಬೇಕೆಂಬ ಉದ್ದೇಶದಿಂದ ಸುಗ್ರಿವಾಜ್ಞೆ ತರಲು ಚಿಂತನೆ ನಡೆದಿದೆ ಎಂದರು.

ಸರ್ಕಾರಿ ಹಾಗೂ ಖಾಸಗಿ ತೆರೆದ ಕೊಳವೆ ಬಾವಿಗಳಿದ್ದರೆ ಹಾಗೂ ಕೊಳವೆ ಬಾವಿಗಳಲ್ಲದೇ ಇನ್ನಿತರ ನಿರುಪಯುಕ್ತ ಗುಂಡಿಗಳಿದ್ದರೆ ಕೂಡಲೇ ಮುಚ್ಚಲು ಕ್ರಮ ಕೈಗೊಳ್ಳುವಂತೆ ಎಲ್ಲ ಜಿಲ್ಲಾ, ತಾಲೂಕು ಮತ್ತು ಗ್ರಾಮ ಪಂಚಾಯತಿಗಳಿಗೆ ನಿರ್ದೇಶನ ನೀಡುವ ಸುತ್ತೋಲೆ ಹೊರಡಿಸಲಾಗುತ್ತಿದೆ ಎಂದು ಹೇಳಿದರು.