ನವದೆಹಲಿ(ಸೆ.03): ಐಎನ್ಎಕ್ಸ್ ಮೀಡಿಯಾ ಹಗರಣದ ಪ್ರಮುಖ ಆರೋಪಿ, ಕೇಂದ್ರದ ಮಾಜಿ ಸಚಿವ ಪಿ ಚಿದಂಬರಂ ಸಿಬಿಐ ಕಸ್ಟಡಿ ಅವಧಿಯನ್ನು ಸೆ.05ರವೆರೆಗೆ ವಿಸ್ತರಿಸಿ ಸುಪ್ರೀಂ ಕೋರ್ಟ್ ಆದೇಶ ನೀಡಿದೆ.

ಸಿಬಿಐ ತಮ್ಮನ್ನು ವಶಕ್ಕೆ ಪಡೆದಿರುವುದನ್ನು ಪ್ರಶ್ನಿಸಿ ಚಿದಂಬರಂ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಸೆಪ್ಟೆಂಬರ್ 5ರವರೆಗೆ ಚಿದಂಬರಂಗೆ ಸಿಬಿಐ ಕಸ್ಟಡಿ ಅವಧಿ ವಿಸ್ತರಿಸಿದೆ.

ಇದೇ ವೇಳೆ ಸೆ.೦5ರಂದು ಸುಪ್ರೀಂಕೋರ್ಟ್ ಒಂದು ವೇಳೆ ಜಾಮೀನು ಮಂಜೂರು ಮಾಡಿದರೆ, ಚಿದಂಬರಂ ಅವರನ್ನುಜರಿ ನಿರ್ದೇಶನಾಲಯ ತನ್ನ ವಶಕ್ಕೆ ಪಡೆಯುವ ಸಾಧ್ಯತೆ ಇದೆ.

ಚಿದಂಬರಂ ಅವರ 15 ದಿನಗಳ ಕಸ್ಟಡಿ ಸೆಪ್ಟೆಂಬರ್ 5ಕ್ಕೆ ಕೊನೆಗೊಳ್ಳಲಿದ್ದು, ಮಧ್ಯಂತರ ಜಾಮೀನು ಅರ್ಜಿಯ ವಿಚಾರಣಾ ನ್ಯಾಯಾಲಯದ ಮುಂದೆ ಜಾಮೀನಿಗಾಗಿ ಒತ್ತಾಯಿಸದಿರಲು ಚಿದಂಬರಂ ಪರ ವಕೀಲರು ಒಪ್ಪಿದ್ದಾರೆ.